Publish Date: Tue, 17 Oct 2017 (15:09 IST)
Updated Date: Tue, 17 Oct 2017 (15:11 IST)
ಚಾಮುಂಡೇಶ್ವರಿ ಕ್ಷೇತ್ರದಿಂದ ಹಿರಿಯ ಜೆಡಿಎಸ್ ಮುಖಂಡ ಜಿ.ಟಿ. ದೇವೇಗೌಡ ಕಣಕ್ಕೆ ಇಳಿಯವುದು ಖಚಿತ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದಿಂದ ಜಿ.ಟಿ.ದೇವೇಗೌಡ ಕಣಕ್ಕಿಳಿಯಲಿದ್ದು, ಹುಣಸೂರು ಕ್ಷೇತ್ರದಿಂದ ಎಚ್.ವಿಶ್ವನಾಥ್ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಹುಣಸೂರು ಕ್ಷೇತ್ರದಿಂದ ಬೇರೆಯವರಿಗೆ ಟಿಕೆಟ್ ನೀಡಲಾಗುತ್ತಿದೆ ಎನ್ನುವ ವದಂತಿಗಳಲ್ಲಿ ಸತ್ಯಾಂಶವಿಲ್ಲ. ಹಿರಿಯ ಮುಖಂಡರಾದ ವಿಶ್ವನಾಥ್ ಸ್ಪರ್ಧೆಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಸಿದ್ದತೆ ಕೊನೆಯ ಹಂತದಲ್ಲಿದ್ದು, ನವೆಂಬರ್ ಕೊನೆಯ ವಾರದಲ್ಲಿ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.