ಸತೀಶ್ ಜಾರಕಿಹೊಳಿ- ಕುಮಾರಸ್ವಾಮಿ ಭೇಟಿ ಬಗ್ಗೆ ಹೊಸ ಬಾಂಬ್ ಸಿಡಿಸಿದ ಜಿಟಿ ದೇವೇಗೌಡ

Sampriya
ಗುರುವಾರ, 27 ಮಾರ್ಚ್ 2025 (19:05 IST)
Photo Courtesy X
ಮೈಸೂರು: ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುವ ಸಂದರ್ಭ ಬಂದಲ್ಲಿ ತಮಗೆ ಬೆಂಬಲ ನೀಡುವ ದೃಷ್ಟಿಯಿಂದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿಯಗಿರುಬಹುದು ಎಂದು ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಆಗುವ ಅವಕಾಶ ಸಿಕ್ಕದರೆ ಜೆಡಿಎಸ್​​ನ 18 ಶಾಸಕರ ಬೆಂಬಲ ನೀಡಬೇಕು ಎಂದು ಸತೀಶ್ ಜಾರಕಿಹೊಳಿ ಕೇಳಿರಬಹುದು. ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅವರು ಬೇರೆ ಕಾರಣಕ್ಕೆ ಕುಮಾರಸ್ವಾಮಿಯವರನ್ನು ಭೇಟಿ ಮಾಡಿರಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.

ಜಾರಕಿಹೊಳಿಯವರು ಮಾಜಿ ಪ್ರಧಾನಿ, ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದಾರೆ ಎಂದರೆ ಅದಕ್ಕೆ ಇದೇ ಕಾರಣ. ಒಂದು ವೇಳೆ ಜೆಡಿಎಸ್ ಅವರಿಗೆ ಬೆಂಬಲ ನೀಡಿದರೂ ನಾನು ಈ ವಿಚಾರದಲ್ಲಿ ತಟಸ್ಥನಾಗಿರುತ್ತೇನೆಂದು ಮಾರ್ಮಿಕವಾಗಿ ನುಡಿದರು.

ಇನ್ನೂ ಶಾಸಕ ಬಸನಗೌಡ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು ಅದು ಬಿಜೆಪಿಯ ಆಂತರಿಕ ವಿಷಯ. ಅದರ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ. ಮುಂದೆ ಇನ್ನೂ ಏನೇನು ಬೆಳವಣಿಗೆ ಆಗುತ್ತೆ ಕಾದು ನೋಡೋಣ ಎಂದು ತಿಳಿಸಿದರು.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

ಮುಂದಿನ ಸುದ್ದಿ
Show comments