Select Your Language

Notifications

webdunia
webdunia
webdunia
webdunia

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಶಾಸಕ ಜಿ.ಟಿ.ದೇವೇಗೌಡ

Sampriya

ಮೈಸೂರು , ಮಂಗಳವಾರ, 26 ಆಗಸ್ಟ್ 2025 (19:28 IST)
ಮೈಸೂರು: ನಾನು ದಲಿತರ ಪರವಾಗಿ ಅನೇಕ ಕೆಲಸ ಮಾಡಿದ್ದೇನೆ. ನಾನು ದಲಿತ ವಿರೋಧಿಯಲ್ಲ. ನನ್ನಿಂದ ತಪ್ಪಾಗಿದ್ದರೆ ಕ್ಷಮಿಸಿ, ಟೀಕಿಸುವವರು ನನ್ನ ಪಾಲಿನ ದೇವರು ಎಂದು ಶಾಸಕ ಜಿಟಿ ದೇವೇಗೌಡ ತಿಳಿಸಿದರು. 

ವಿಧಾನಸಭಾ ಕಲಾಪದಲ್ಲಿ ಜಿಟಿಡಿ ದಲಿತ ವಿರೋಧಿ ಹೇಳಿಕೆ ನೀಡಿದ್ದಾರೆಂಬ ಕುರಿತು ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಸರ್ಕಾರದ ಪಾಲುಗಾರಿಕೆ ಇರುವ ಸಂಘಗಳಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸೇರಿಸಿ ಹಾಗೂ ಒಬ್ಬ ಹಿಂದುಳಿದ ವರ್ಗದವರಿಗೂ ಸ್ಥಾನಮಾನ ನೀಡಿ ಎಂದು ಕಲಾಪದಲ್ಲಿ ವಿನಂತಿಸಿದ್ದೇನೆ. ಇದನ್ನು ತಪ್ಪಾಗಿ ಅರ್ಥೈಸಿಕೊಂಡು ಹಲವರು ಟೀಕೆಗಾಗಿ ಕೆಟ್ಟ ಪದಗಳನ್ನು ಬಳಸಿದ್ದಾರೆ ಎಂದರು.

ಇದುವರೆಗೆ ನನ್ನ ರಾಜಕೀಯ ಜೀವನದಲ್ಲಿ ದೂರುಗಳು ದಾಖಲಾಗಿಲ್ಲ.ಈ ವಿಚಾರವಾಗಿ ದಾಖಲಾದರೂ, ನನ್ನ ವಿರುದ್ಧ ಕೆಟ್ಟದಾಗಿ ಮಾತನಾಡುವರ ವಿರುದ್ಧ ದೂರು ನೀಡುವುದಿಲ್ಲ. ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳಲಿ ಎಂದರು.

ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, 'ಪ್ರತೀ ವರ್ಷವೂ ದಸರಾವನ್ನು ಸಾಹಿತಿ, ಮಠಾಧೀಶರು, ಹಿರಿಯರಿಂದ ಉದ್ಘಾಟಿಸಲಾಗುತ್ತದೆ. 

ಹಿಂದೆ ನಿಸಾರ್ ಅಹಮದ್ ಕೂಡ ಉದ್ಘಾಟಿಸಿದ್ದರು. ದಸರಾದ ಉನ್ನತ ಮಟ್ಟದ ಸಮಿತಿಯು ಮುಖ್ಯಮಂತ್ರಿಗಳು ಉದ್ಘಾಟಕರನ್ನು ಆಯ್ಕೆ ಮಾಡಲು ಅನುಮತಿ ನೀಡಿತ್ತು, ಅದಕ್ಕೆ ಸರಿಯಾಗಿ ಅವರು ಆಯ್ಕೆ‌ ಮಾಡಿದ್ದಾರೆ. ಚಾಮುಂಡೇಶ್ವರಿ ಮೇಲೆ‌ ನಂಬಿಕೆ‌ ಇಲ್ಲದಿದ್ದರೆ ಉದ್ಘಾಟಕರು ಬರೋದೆ‌ ಇಲ್ವಲ್ಲ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ