Publish Date: Tue, 20 Feb 2018 (12:22 IST)
Updated Date: Tue, 20 Feb 2018 (12:24 IST)
ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹಕ್ಕು ಚ್ಯುತಿ ಮಂಡನೆ ಮಾಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಜಿ.ಟಿ.ದೇವೇಗೌಡ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪುತ್ರ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಲು ಯಾವ ಅಧಿಕಾರವಿದೆ. ಕ್ಷೇತ್ರದಲ್ಲಿ ನನ್ನ ಹಕ್ಕು ಚ್ಯುತಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಹಕ್ಕುಚ್ಯುತಿ ಮಂಡನೆ ವಿಚಾರದಲ್ಲಿ ಸದನದಲ್ಲಿ ಗಲಾಟೆ ನಡೆದಿದ್ದು, ಸಿದ್ದರಾಮಯ್ಯ ಅವರು ಯುತೀಂದ್ರ ಹೋಗಿದ್ದಾನೋ, ಇಲ್ಲವೋ ಗೊತ್ತಿಲ್ಲ ಎಂದ ಅವರು ಬಳಿಕ ಒಪ್ಪಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.