Select Your Language

Notifications

webdunia
webdunia
webdunia
webdunia

ಗ್ಯಾರಂಟಿ ಯೋಜನೆ ಸಂಪೂರ್ಣ ರದ್ದಾಗುವ ಸಾಧ್ಯತೆ: ಛಲವಾದಿ ನಾರಾಯಣಸ್ವಾಮಿ

ಕರ್ನಾಟಕ ಗ್ಯಾರಂಟಿ ಯೋಜನೆ

Sampriya

ಬೆಂಗಳೂರು , ಶುಕ್ರವಾರ, 11 ಜುಲೈ 2025 (20:28 IST)
Photo Credit X

ಬೆಂಗಳೂರು: ‘ರಾಜ್ಯದ ಕಾಂಗ್ರೆಸ್‌ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳು ಮುಂದೊಂದು ದಿನ ಸಂಪೂರ್ಣವಾಗಿ ರದ್ದಾಗಬಹುದು. ಈ ಸರ್ಕಾರವನ್ನು ನಂಬಲು ಸಾಧ್ಯವಿಲ್ಲ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

‘ಗೃಹಲಕ್ಷ್ಮಿ’ ಯೋಜನೆ ಅಡಿಯಲ್ಲಿ ಗೃಹಿಣಿಯರಿಗೆ ಪ್ರತಿ ತಿಂಗಳೂ ₹2,000 ನೀಡಲು ಸಾಧ್ಯವಿಲ್ಲ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌.ಎಂ.ರೇವಣ್ಣ ನೀಡಿರುವ ಹೇಳಿಕೆಗೆ ಛಲವಾದಿ ‘ಎಕ್ಸ್‌’ ನಲ್ಲಿ ಪ್ರತಿಕ್ರಿಯಿಸಿದ್ದಾರೆ.

‘ಗ್ಯಾರಂಟಿ ಯೋಜನೆಗಳನ್ನು ನಿರ್ವಹಿಸುವಲ್ಲಿ ಕಾಂಗ್ರೆಸ್‌ ಸರ್ಕಾರ ವಿಫಲವಾಗಿದೆ ಎಂಬುದನ್ನು ಇದು ತೋರಿಸುತ್ತದೆ’ ಎಂದು ಹೇಳಿದ್ದಾರೆ.

‘ಗ್ಯಾರಂಟಿ ಅನುಷ್ಠಾನ ಸಮಿತಿಯನ್ನು ರಚಿಸಿದ ಸರ್ಕಾರವು ಅದರಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಅಧಿಕಾರ ಕೊಟ್ಟಿದೆ. ಅವರಿಗಾಗಿ ನೂರಾರು ಕೋಟಿ ರೂಪಾಯಿ ವೆಚ್ಚ ಮಾಡಿದೆ. ಈಗ ಪ್ರತಿ ತಿಂಗಳು ಹಣ ನೀಡಲು ಸಾಧ್ಯವಿಲ್ಲ ಎಂದು ಹೇಳುತ್ತಿರುವುದು ನಿರಾಸೆ ಹುಟ್ಟಿಸಿದೆ’ ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಚಿಕ್ಕಮಗಳೂರಿನಿಂದ ತಿರುಪತಿಗೆ ಹೊರಟ ಮೊದಲ ರೈಲು, ದೀರ್ಘದಂಡ ನಮಸ್ಕಾರ ಮಾಡಿದ ವೃದ್ಧೆ