ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಡಿಕೆ ಶಿವಕುಮಾರ್‌

sampriya
ಗುರುವಾರ, 31 ಅಕ್ಟೋಬರ್ 2024 (16:54 IST)
photo credit X
ಬೆಂಗಳೂರು: ರಾಜ್ಯದಲಿ ಜಾರಿಯಾಗಿರುವ ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ತಿರುಚಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಶಕ್ತಿ ಯೋಜನೆ ಮರುಪರಿಶೀಲನೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಶಕ್ತಿ ಯೋಜನೆ ಸಂಬಂಧ ನಾನು ಬುಧವಾರ ನೀಡಿದ್ದ ಹೇಳಿಕೆಯನ್ನು ತಿರುಚಲಾಗಿದೆ. ಯೋಜನೆ ನಿಲ್ಲಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.

ಈಗಾಗಲೇ ಜಾರಿಯಲ್ಲಿರುವ ನಮ್ಮ ಐದು ಗ್ಯಾರಂಟಿ ಯೋಜನೆಗಳ ಪೈಕಿ ಯಾವುದೇ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಈ ಯೋಜನೆ ಸೌಲಭ್ಯ ಬೇಡ ಎಂದು ಹೇಳುವವರಿಗೆ ಬಲವಂತ ಮಾಡಲು ಸಾಧ್ಯವೇ? ಅವರ ಸಂಖ್ಯೆ ಶೇಕಡಾ 7ರಿಂದ ಶೇ 8ರಷ್ಟು ಇರಬಹುದು ಎಂದರು.

 ‘ಈಗಿನ ಅವಧಿ ಜತೆಗೆ ಮುಂದಿನ ಐದು ವರ್ಷದ ಅವಧಿಯೂ ಸೇರಿ ಒಟ್ಟು ಎಂಟೂವರೆ ವರ್ಷ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿದೆ ಎಂದು ಗೊಂದಲಕ್ಕೆ ತೆರೆ ಎಳೆದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಕೇಂದ್ರದ ನಡೆಯಿಂದ ಮೆಕ್ಕೆಜೋಳ ರೈತರು ಸಂಕಷ್ಟಕ್ಕೆ: ಸಿಎಂ ಸಿದ್ದರಾಮಯ್ಯ

ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆಂದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments