Select Your Language

Notifications

webdunia
webdunia
webdunia
webdunia

ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲುವುದಿಲ್ಲ: ಬಿಜೆಪಿ ಸುಳ್ಳಿನ ಕಾರ್ಖಾನೆ ಎಂದ ಸಿಎಂ ಸಿದ್ದರಾಮಯ್ಯ

Siddaramaiah

Sampriya

ಕೋಲಾರ , ಶನಿವಾರ, 6 ಏಪ್ರಿಲ್ 2024 (18:55 IST)
Photo Courtesy Facebook
ಕೋಲಾರ: ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿಗಳು ನಿಲ್ಲುವುದಿಲ್ಲ. ಕಾಂಗ್ರೆಸ್ ಗ್ಯಾರಂಟಿಗಳಿಗೆ ಐದು ವರ್ಷಗಳ ವಾರಂಟಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕುರುಡುಮಲೆ ವಿನಾಯಕನ ದೇವಸ್ಥಾನದಲ್ಲಿ ಶನಿವಾರ ವಿಶೇಷ ಪೂಜೆ ಸಲ್ಲಿಸಿ ಲೋಕಸಭೆ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ಬಳಿಕ ರೋಡ್ ಶೋನಲ್ಲಿ ಮಾತನಾಡಿದರು.

ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುತ್ತದೆ ಎಂದು ಬಿಜೆಪಿ ಹೇಳುತ್ತಿದೆ. ಬಿಜೆಪಿಯವರು ಮೊದಲಿಗೆ ಗ್ಯಾರಂಟಿ ಜಾರಿ ಸಾಧ್ಯವೇ ಇಲ್ಲ, ರಾಜ್ಯ ದಿವಾಳಿ ಆಗಲಿದೆ ಎನ್ನುವ ಸುಳ್ಳು ಸೃಷ್ಟಿಸಿದರು. ಜಾರಿ ಮಾಡಿದ ಬಳಿಕ ಹೊಸ ಸುಳ್ಳು ಸೃಷ್ಟಿಸಿ ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ನಿಂತು ಹೋಗುತ್ತವೆ ಎನ್ನುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಬಿಜೆಪಿ ಸೋಲುವ ಭೀತಿಯಿಂದ ಸುಳ್ಳು ಹೇಳಿಕೆಗಳನ್ನು ನೀಡುತ್ತಿದೆ. ನೀವು ಅದಕ್ಕೆ ತಲೆ ಕೆಡಿಸಿಕೊಳ್ಳಬೇಡಿ. ಬಿಜೆಪಿ ಸುಳ್ಳಿನ ಕಾರ್ಖಾನೆ. ನಾವು ಕೊಟ್ಟ ಮಾತಿನಂತೆ ನಡೆದುಕೊಂಡು ನೀವು ನೀಡಿದ ಮತಕ್ಕೆ ಘನತೆ ತಂದಿದ್ದೇವೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ, ನೀವು ಕೊಟ್ಟ ಮತಕ್ಕೆ  ಮೌಲ್ಯ ತಂದು ಕೊಡುವ ರೀತಿಯಲ್ಲಿ ಸರ್ಕಾರ ಕೆಲಸ ಮಾಡುತ್ತದೆ ಎಂದು ಭರವಸೆ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಸಭಾ ಸದಸ್ಯರಾಗಿ ಜೆಪಿ ನಡ್ಡಾ ಪ್ರಮಾಣ ವಚನ ಸ್ವೀಕಾರ