Select Your Language

Notifications

webdunia
webdunia
webdunia
webdunia

ಜೆ ಡಿಎಸ್ ಗೆ ಗುಡ್ ಬೈ ಹೇಳಿ "ಕೈ" ಗೆ ಜೈ ಎಂದ ಗುಬ್ಬಿ ಶ್ರೀನಿವಾಸ್

Gubbi Srinivas said goodbye to J DS and said yes to
bangalore , ಸೋಮವಾರ, 27 ಮಾರ್ಚ್ 2023 (20:50 IST)
ತುಮಕೂರಿನ ಗುಬ್ಬಿ ಕ್ಷೇತ್ರದ ಮಾಜಿ ಸಚಿವ ಹಾಗೂ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್ ಆರ್ ಶ್ರೀನಿವಾಸ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮತ್ತು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.12 ಗಂಟೆಗೆ ವಿಧಾನಸೌಧದಲ್ಲಿ ಸ್ಪೀಕರ್ ಭೇಟಿಯಾಗಿ ಗುಬ್ಬಿ ಶ್ರೀನಿವಾಸ್ ರಾಜೀನಾಮೆ ಸಲ್ಲಿಸಲಿದ್ದಾರೆ.ಈ ಬಗ್ಗೆ ಮಾತನಾಡಿದ ಶ್ರೀನಿವಾಸ್, ಇವತ್ತು ಕಾಗೇರಿ ಅವರಿಗೆ ರಾಜೀನಾಮೆ ಕೊಡುವುದಕ್ಕೆ ಹೋಗ್ತಾಯಿದ್ದೇವೆ. ನಮ್ಮ ತಾಲೂಕಿನಲ್ಲಿರುವ ಎಲ್ಲ ಮುಖಂಡರ ಜೊತೆ ಮಾತನಾಡಿ ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ.....ದೇವೇಗೌಡರು ನನಗೆ ಮಗನ ತರ ನೋಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಇದ್ದರೂ ಸಂಘಟನೆಯ ವಿಚಾರದಲ್ಲಿ ರಾಜಿ ಮಾಡಿಸ್ತಿದ್ರು. ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ 31ಕ್ಕೆ ಸೇರ್ಪಡೆ ಯಾಗುತ್ತೇನೆ. ಕಾಂಗ್ರೆಸ್ ನ ಎಲ್ಲ ವರಿಷ್ಠರೊಂದಿಗೆ ಮಾತುಕತೆ ಮಾಡ್ತೇನೆ ಎಂದು ಗುಬ್ಬಿ ಶ್ರೀನಿವಾಸ್ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್‌ನಿಂದ ಟಿಕೆಟ್​ ಸಿಗುವುದು ಖಚಿತವಾಗಿರುವ ಹಿನ್ನೆಲೆಯಲ್ಲಿ ಗುಬ್ಬಿ ಕ್ಷೇತ್ರದಿಂದಲೇ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸುವ ಆಸೆಯನ್ನು ಕೂಡ ಹೇಳಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡೋ ಬಗ್ಗೆ ಮುಂದೆ ತಿರ್ಮಾನ-ಜನರ್ಧಾನ ರೆಡ್ಡಿ