ಜಿಲ್ಲೆಯಲ್ಲಿ ಆಯೋಜಿಸಲಾದ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಆಗಮಿಸಿದ್ದಾರೆ.
ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಮೂರು ವರ್ಷಗಳ ಕಾಲ ಭ್ರಷ್ಟಾಚಾರರಹಿತ ಅಡಳಿತ ಮಾಡಿದ್ದಾರೆ. ಅವರನ್ನು ದೇಶದ ಜನತೆ ಸಂಪೂರ್ಣವಾಗಿ ಬೆಂಬಲಿಸಿದ್ದಾರೆ ಎಂದರು.
ಪ್ರಧಾನಿ ಮೋದಿ ಗುಜರಾತ್ ಸಿಎಂ ಆಗಿದ್ದಾಗ ಅತ್ಯುತ್ತಮ ಕೆಲಸ ಮಾಡಿದ್ದಾರೆ. ಇದೀಗ ಪ್ರಧಾನಿಯಾದ ನಂತರವೂ ತಮ್ಮ ಜನಪರ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷ ವಿನಾಶಕಾಲೇ ವಿಪರೀತ ಬುದ್ದಿ ಎನ್ನುವಂತೆ ವರ್ತಿಸುತ್ತಿದೆ. ಮೋದಿ ಸರಕಾರದ ಸಾಧನೆಗಳನ್ನು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಕಾರ್ಯಕ್ರಮದ ಮೂಲಕ ಜನತೆಗೆ ತಲುಪಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಗುಜರಾತ್ ಸಿಎಂ ವಿಜಯ್ ರೂಪಾನಿ ತಿಳಿಸಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.