Select Your Language

Notifications

webdunia
webdunia
webdunia
webdunia

ಚುನಾವಣೆ ಮೇಲೂ ಪರಿಣಾಮ ಬೀರಲಿದೆ ಗುಜರಾತ್ ಫಲಿತಾಂಶ : ನಿರಾಣಿ

ಚುನಾವಣೆ ಮೇಲೂ ಪರಿಣಾಮ ಬೀರಲಿದೆ ಗುಜರಾತ್ ಫಲಿತಾಂಶ : ನಿರಾಣಿ
ಬೆಂಗಳೂರು , ಗುರುವಾರ, 8 ಡಿಸೆಂಬರ್ 2022 (12:46 IST)
ಬೆಂಗಳೂರು : ಹಿಂದಿನ ಎಲ್ಲ ದಾಖಲೆಗಳನ್ನು ಮುರಿದು ಸತತ 7ನೇ ಬಾರಿಗೆ ಗುಜರಾತ್ ನಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವುದಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್.ಆರ್ ನಿರಾಣಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅವರ ಸಂಘಟನಾ ಚಾತುರ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತಂತ್ರಗಾರಿಕೆ,

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸರಳತೆ ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಇಷ್ಟು ದೊಡ್ಡ ಮಟ್ಟದಲ್ಲಿ ಗೆಲುವಿಗೆ ಕಾರಣವಾಗಿದೆ ಎಂದು ನಿರಾಣಿ ವಿಶ್ಲೇಷಿಸಿದ್ದಾರೆ.

ವಿಶ್ವ ನಾಯಕ ನರೇಂದ್ರ ಮೋದಿ ಅವರ ಜನಪ್ರಿಯತೆಗೆ ಗುಜರಾತ್ ವಿಧಾನಸಭಾ ಚುನಾವಣೆ ಫಲಿತಾಂಶವೇ ಸಾಕ್ಷಿ. ಸ್ವಚ್ಛ, ಪಾರದರ್ಶಕ ಹಾಗೂ ಸರ್ವರ ವಿಕಾಸವೇ ಪಕ್ಷದ ಗೆಲುವಿಗೆ ಕಾರಣವಾಗಿದೆ ಎಂದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಲಗಲು ಬೆಡ್ರೂಂಗಳನ್ನೂ ಸಿದ್ಧಪಡಿಸಿದ ಮಸ್ಕ್?