Publish Date: Sat, 24 Feb 2018 (07:16 IST)
Updated Date: Sat, 24 Feb 2018 (07:22 IST)
ಬೆಂಗಳೂರು : ಶಾಂತಿ ನಗರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರನ ಹಲ್ಲೆ ಪ್ರಕರಣದ ಕಾವು ಆರುವ ಮೊದಲೆ ಈಗ ಮತ್ತೊಬ್ಬ ಕಾಂಗ್ರೆಸ್ ಶಾಸಕನ ಸಹೋದರನ ಗೂಂಡಾಗಿರಿ ಪ್ರಕರಣ ಬೆಳಕಿಗೆ ಬಂದಿದೆ.
ಧಾರವಾಡ ಜಿಲ್ಲೆಯ ಕುಂದಗೋಳದ ಕಾಂಗ್ರೆಸ್ ಶಾಸಕ ಸಿ.ಎಸ್.ಶಿವಳ್ಳಿ ಅವರ ಸಹೋದರ ಮತ್ತು ಆತನ ಸಹಚರರು ಪ್ರತಿಭಟನೆ ಸಂದರ್ಭದಲ್ಲಿ ಅಡ್ಡ ಬಂದಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಹಿಗ್ಗಾಮುಗ್ಗಾ ಹೊಡೆದಿದ್ದು, ಈಗ ಆ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕ ಸಿ.ಎಸ್.ಶಿವಳ್ಳಿ ಸಹೋದರ ಅಡಿವೆಪ್ಪಾ ಶಿವಳ್ಳಿ ಮತ್ತು ಆತನ ಸಹಚರರು ಈ ರೀತಿ ಗೂಂಡಾಗಿರಿ ನಡೆಸಿರುವುದಾಗಿ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ