Webdunia - Bharat's app for daily news and videos

Install App

ದಸರಾ ಆನೆ ಬಲರಾಮನಿಗೆ ಗುಂಡೇಟು

Webdunia
ಶನಿವಾರ, 17 ಡಿಸೆಂಬರ್ 2022 (18:46 IST)
ದಸರಾ ಆನೆ ಬಲರಾಮನಿಗೆ ಬಂದೂಕಿನಿಂದ ಗುಂಡು ಹೊಡೆದಿದ್ದ ಜಮೀನೊಂದರ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪದಲ್ಲಿದ್ದ ಜಮೀನಿಗೆ ಬಲರಾಮ ಆನೆ ಹೋಗಿತ್ತು. ಈ ವೇಳೆ ಜಮೀನಿನ ಮಾಲೀಕ ಸುರೇಶ್‌ ಎಂಬಾತ ಸಿಂಗಲ್‌ ಬ್ಯಾರಲ್‌ ಬಂದೂಕಿನಿಂದ ಆನೆಗೆ ಗುಂಡು ಹಾರಿಸಿದ್ದ. ಇದರಿಂದ ಬಲರಾಮ ಆನೆ ತೊಡೆ ಭಾಗಕ್ಕೆ ಗುಂಡು ಹೊಕ್ಕಿ ಗಾಯಗೊಂಡಿತ್ತು. ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಪಶುವೈದ್ಯಾಧಿಕಾರಿ ಡಾ.ರಮೇಶ್ ಸದ್ಯ ಆನೆಗೆ ಚಿಕಿತ್ಸೆ ನೀಡುತ್ತಿದ್ದಾರೆ. ಬಲರಾಮ‌ ಚೇತರಿಸಿಕೊಂಡಿದ್ದಾನೆ. ವನ್ಯಜೀವಿ ಕಾಯ್ದೆ ಉಲ್ಲಂಘನೆ ಆರೋಪದಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಬಂದೂಕು, ಕಾರ್ಟ್ರಿಜ್‌ ವಶಪಡಿಸಿಕೊಳ್ಳಲಾಗಿದೆ. ಜಮೀನು ಮಾಲೀಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈಗ 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments