Select Your Language

Notifications

webdunia
webdunia
webdunia
webdunia

ಗುರುರಾಘವೇಂದ್ರ, ವಶಿಷ್ಠ ಸೌಹಾರ್ದ ಬ್ಯಾಂಕ್ ಹಗರಣ ಸಿಬಿಐಗೆ : ಸಚಿವ ಸೋಮಶೇಖರ್

ಗುರುರಾಘವೇಂದ್ರ, ವಶಿಷ್ಠ ಸೌಹಾರ್ದ ಬ್ಯಾಂಕ್ ಹಗರಣ ಸಿಬಿಐಗೆ : ಸಚಿವ ಸೋಮಶೇಖರ್
ಬೆಂಗಳೂರು , ಬುಧವಾರ, 18 ಜನವರಿ 2023 (07:46 IST)
ಬೆಂಗಳೂರು : ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್, ವಶಿಷ್ಠ ಸೌಹಾರ್ದ ಸಹಕಾರಿ ಬ್ಯಾಂಕ್ಗಳ ಅವ್ಯವಹಾರ ಪ್ರಕರಣವನ್ನು ಸಿಬಿಐಗೆ ವಹಿಸಲು ಶಿಫಾರಸು ಮಾಡಲಾಗುವುದು ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಹೇಳಿದರು.

ವಿಕಾಸಸೌಧದಲ್ಲಿ ನಡೆದ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್ನ ಅವ್ಯವಹಾರಗಳು ಮತ್ತು ಪುನಃಶ್ಚೇತನ ಹಾಗೂ ವಶಿಷ್ಠ ಸೌಹಾರ್ದ ಸಹಕಾರಿ ಬ್ಯಾಂಕ್ನ ಅವ್ಯವಹಾರಗಳ ಕುರಿತ ಪರಾಮರ್ಶೆ ಸಭೆಯಲ್ಲಿ ಮಾತನಾಡಿದ ಸಚಿವರು ಸರ್ಕಾರದ ನಿಲುವು ಘೋಷಣೆ ಮಾಡಿದರು.

ಗುರುರಾಘವೇಂದ್ರ, ವಶಿಷ್ಠ ಸೌಹಾರ್ದ ಸೇರಿದಂತೆ ಇತರೆ ಯಾವುದೇ ಬ್ಯಾಂಕ್ಗಳಲ್ಲಿ ನಡೆದಿರುವ ಅವ್ಯವಹಾರಗಳಿದ್ದರೆ ಆ ಪ್ರಕರಣಗಳನ್ನು ಸಹ ಸಿಬಿಐಗೆ ವಹಿಸಲು ಶಿಫಾರಸು ಮಾಡಲಾಗುತ್ತದೆ. ಈ ಕುರಿತು ನಿರ್ಣಯ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆ : ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ.ನಡ್ಡಾ ಮುಂದುವರಿಕೆ