Publish Date: Fri, 30 Mar 2018 (11:02 IST)
Updated Date: Fri, 30 Mar 2018 (11:16 IST)
ಕಲಬುರಗಿ : ಕಾಂಗ್ರೆಸ್ ಶಾಸಕರಾಗಿದ್ದ ಮಾಲೀಕಯ್ಯ ಗುತ್ತೇದಾರ್ ಅವರು ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ‘ಗುತ್ತೇದಾರ್ ತಾವಾಗಿಯೇ ಬಿಜೆಪಿ ಸೇರ್ಪಡೆಯಾಗಿದ್ದಾರೆ ‘ ಎಂದು ಕಲಬುರಗಿಯಲ್ಲಿ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ ಅವರಿಗೆ ಟಿಕೆಟ್ ನೀಡುತ್ತೇವೆ ಅಂತಾ ಯಾವುದೇ ಭರವಸೆ ನೀಡಿಲ್ಲ. ರಾಜ್ಯದ 224 ಕ್ಷೇತ್ರಗಳ ಟಿಕೆಟ್ ಇನ್ನೂ ಫೈನಲ್ ಆಗಿಲ್ಲ. ಟಿಕೆಟ್ ಫೈನಲ್ ಅಂತಾ ಕೇವಲ ಮಾಧ್ಯಮಗಳಲ್ಲಿ ಬರುತ್ತಿದೆ. ಅಭ್ಯರ್ಥಿಗಳ ಆಯ್ಕೆಗೆ ಕೇಂದ್ರ ಸಮಿತಿ ಮೂರು ಅಂಶದ ಸೂತ್ರ ರಚಿಸಿದೆ’ ಎಂದು ಕಲಬುರಗಿಯಲ್ಲಿ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ