ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಮಾಜಿ ಸಿಎಂ ವಿರುದ್ಧ ತೀಕ್ಷ್ಣವಾಗಿಯೇ ಚಾಟಿ ಬೀಸಿ ಟಾಂಗ್ ನೀಡಿದ್ದಾರೆ.
ಸಿದ್ದರಾಮಯ್ಯ ದೊಡ್ಡವರು. ಅವರ ವ್ಯಕ್ತಿತ್ವ ಇನ್ನೂ ದೊಡ್ಡದಾಗಲಿ. ತಮ್ಮ ವಿರುದ್ಧ ನೀಡಿರುವ ಹೇಳಿಕೆ ಕುರಿತಂತೆ ತಾವು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.
ಏನು ಬೇಕೋ ಅದನ್ನು ಮಾತನಾಡುವ ಸ್ವಾತಂತ್ರ್ಯ ಸಿದ್ದರಾಮಯ್ಯ ಅವರಿಗೆ ಇದೆ ಎಂದ ಅವರು, ಬಿಜೆಪಿ ಜೊತೆ ಯಾವುದೇ ಚರ್ಚೆ, ಮಾತುಕತೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.