Publish Date: Wed, 10 May 2023 (13:58 IST)
Updated Date: Wed, 10 May 2023 (16:01 IST)
ಹಾಸನ : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೆಲಿಕಾಪ್ಟರ್ನಲ್ಲಿ ಆಗಮಿಸಿ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮತ ಚಲಾಯಿಸಿದರು.
ರಾಜ್ಯ ರಾಜಧಾನಿ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಬಂದ ಹೆಚ್.ಡಿ ದೇವೇಗೌಡ ಅವರು ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಲ್ಯಾಂಡಿಂಗ್ ಆದರು.
ಅದಾದ ಬಳಿಕ ಹೊಳೆನರಸೀಪುರದಿಂದ ಪಡುವಲಹಿಪ್ಪೆ ಗ್ರಾಮಕ್ಕೆ ಆಗಮಿಸಿ ಹೊಳೆನರಸೀಪುರ ಕ್ಷೇತ್ರದ ಮತಗಟ್ಟೆ ಸಂಖ್ಯೆ 251 ರಲ್ಲಿ ಹಕ್ಕು ಚಲಾವಣೆ ಮಾಡಿದರು.