Publish Date: Tue, 14 Jul 2026 (15:11 IST)
Updated Date: Tue, 14 Jul 2026 (15:14 IST)
ಬೆಂಗಳೂರು: ಕೃಷ್ಣಭೈರೇಗೌಡ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತಯುವಾರಿ ಅಧಿಕಾರಿ ವಹಿಸಿಕೊಂಡಾಗಿನಿಂದಲೂ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ರಾಜಕೀಯವೇ ಬೇರೆ, ಮಾಡುವ ಕೆಲಸವೇ ಬೇರೆ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ಶ್ಲಾಘಿಸಿದರು.
ಇಂದು ಬಿಡದಿ ಟೌನ್ಶಿಪ್ ವಿಚಾರದ ಬಗ್ಗೆ ಜೆಪಿ ಭವನದಲ್ಲಿ ಹೆಚ್ಡಿಡಿ ತುರ್ತು ಸುದ್ದಿಗೋಷ್ಠಿಯಲ್ಲಿ ಅವರು ಕೃಷ್ಣ ಭೈರೇಗೌಡ ಅವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಶೇಷವಾಗಿ ಬೀದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಮತ್ತು ಅವರನ್ನು ಸೂಕ್ತ ಜಾಗಕ್ಕೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಅವರು ಮಾಡುತ್ತಿರುವ ಕೆಲಸಗಳು ಶ್ಲಾಘನೀಯ ಎಂದು ಹೇಳಿದರು.
ಸಾಮಾನ್ಯವಾಗಿ ಆಡಳಿತ ಪಕ್ಷದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸುವ ದೇವೇಗೌಡರು, ವಿಪಕ್ಷದಲ್ಲಿದ್ದರೂ ಸಚಿವರೊಬ್ಬರ ಸಾರ್ವಜನಿಕ ಹಿತಾಸಕ್ತಿಯ ಕೆಲಸವನ್ನು ಗುರುತಿಸಿ ಬೆನ್ನುತಟ್ಟಿರುವುದು ವಿಶೇಷ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ