ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪುನರ್ ಆಯ್ಕೆಯಾಗಿದ್ದಾರೆ.
84 ವಯಸ್ಸಿನ ನನಗೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಬೇಕಿರಲಿಲ್ಲ. ನಿಜಕ್ಕೂ ಇದು ಸಂಕಷ್ಟದ ಸಮಯ. ಇಂದಿನ ರಾಜಕೀಯ ಬೆಳವಣಿಗೆಯಿಂದ ರಾಷ್ಟ್ರೀಯ ಅಧ್ಯಕ್ಷ ಹುದ್ದೆ ಸ್ವೀಕರಿಸಿದ್ದೇನೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಸ್ಪಷ್ಟಪಡಿಸಿದರು.
ರಾಜಕಾರಣದಿಂದ ಪಲಾಯನ ಮಾಡಲು ನನಗೆ ಇಷ್ಟ ಇಲ್ಲ. ನನ್ನ ರಾಜಕೀಯ ಜೀವನದ ಅನುಭವಗಳನ್ನು ರಾಜ್ಯದ ಜನತೆಯ ಮುಂದೆ ಹಂಚಿಕೊಳ್ಳುತ್ತೇನೆ ಎಂದರು.
ಕೇಂದ್ರ ಸರಕಾರದ ನೋಟ್ ಬ್ಯಾನ್ ವಿಚಾರ.....
ಕಪ್ಪು ಹಣ ತಡೆಗಟ್ಟುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 500 ಹಾಗೂ 1000 ಮುಖಬೆಲೆಯ ನೋಟುಗಳನ್ನು ರದ್ದು ಮಾಡಿದ್ದಾರೆ. ಇದು ಕೇಂದ್ರ ಸರಕಾರದ ಅಥವಾ ಸಂಪುಟ ಸಭೆಯ ತೀರ್ಮಾನವೋ? ಅಥವಾ ಆರ್ಥಿಕ ತಜ್ಞರ ಜೊತೆ ಚರ್ಚಿಸಿ ತೆಗೆದುಕೊಂಡ ತೀರ್ಮಾನವೋ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಪ್ರಶ್ನಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ