Publish Date: Fri, 27 Oct 2017 (15:25 IST)
Updated Date: Fri, 27 Oct 2017 (15:28 IST)
ಸಿಬಿಐ ಎಫ್‌ಐಆರ್ ದಾಖಲಿಸಿದ ಕೂಡಲೇ ರಾಜೀನಾಮೆ ನೀಡಬೇಕು ಎನ್ನುವದು ಸರಿಯಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಜಾರ್ಜ್ ಪರ ಬ್ಯಾಟಿಂಗ್ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿ ಪ್ರಕರಣದ ತನಿಖೆ ನಡೆಸಿ ಕ್ಲೀನ್ ಚಿಟ್ ನೀಡಿದೆ. ಸಿಬಿಐ ತನಿಖೆ ಆರಂಭಿಸಿ ಸಾಕ್ಷ್ಯ ದೊರೆತಲ್ಲಿ ಜಾರ್ಜ್ ರಾಜೀನಾಮೆ ನೀಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಸಿಬಿಐ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಾಸಂಗತಿ ಹೊರತರಲಿ. ಜಾರ್ಜ್ ವಿಷಯದಲ್ಲಿ ರಾಜಕೀಯ ಬೆರೆಸೋಲ್ಲ. ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಜಾರ್ಜ್ ಪರ ಬ್ಯಾಟಿಂಗ್ ನಡೆಸಿದ್ದರಿಂದ ಸಿಎಂ ಸಿದ್ದರಾಮಯ್ಯ ಸರಕಾರಕ್ಕೆ ಬೆಂಬಲ ದೊರತಂತಾಗಿದ್ದರೆ, ಬಿಜೆಪಿ ಹೋರಾಟಕ್ಕೆ ಹಿನ್ನೆಡೆಯಾದಂತಾಗಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.