Select Your Language

Notifications

webdunia
webdunia
webdunia
webdunia

ಲೋಕಾಯುಕ್ತ ಬಲಪಡಿಸುವ ಇಚ್ಛೆ ಕಾಂಗ್ರೆಸ್, ಬಿಜೆಪಿಗೆ ಇಲ್ಲ: ಕುಮಾರಸ್ವಾಮಿ ವಾಗ್ದಾಳಿ

ಲೋಕಾಯುಕ್ತ ಬಲಪಡಿಸುವ ಇಚ್ಛೆ ಕಾಂಗ್ರೆಸ್, ಬಿಜೆಪಿಗೆ ಇಲ್ಲ: ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು , ಮಂಗಳವಾರ, 17 ಜನವರಿ 2017 (18:52 IST)
ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ಇಚ್ಛೆ ಕಾಂಗ್ರೆಸ್ ಹಾಗೂ ಬಿಜೆಪಿಗೆ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಮೇಲೆ ಆರೋಪಗಳು ಕೇಳಿ ಬಂದಿವೆ. ಆದರೂ, ಲೋಕಾಯುಕ್ತಕ್ಕೆ ಪದೇ ಪೇದ ಅವರ ಹೆಸರನ್ನೇ ಶಿಫಾರಸ್ಸು ಮಾಡಲಾಗುತ್ತಿದೆ ಎಂದು ರಾಜ್ಯ ಸರಕಾರದ ನಡೆ ಕುರಿತು ಅನುಮಾನ ವ್ಯಕ್ತಪಡಿಸಿದರು.
 
ನಂಜನಗೂಡು ಉಪಾಚುನಾವಣೆ ಎದುರಿಸಲು ಬಿಜೆಪಿ ಬಳಿ ಅಭ್ಯರ್ಥಿಯೇ ಇಲ್ಲ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ, ಚುನಾವಣೆಗ ಸ್ಪರ್ಥಿಸಲು ನಮ್ಮ ಪಕ್ಷದ ನಾಯಕರನ್ನು ಸೆಳೆಯಲು ತೆರೆಮರೆಯ ಕಸರತ್ತು ನಡೆಸುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. 
 
ನಂಜನಗೂಡು ಉಪಚುನಾವಣೆ ಹಾಗೂ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆಸಲು ಜನವರಿ 22 ರಂದು ಮೈಸೂರು ಭಾಗದ ಜೆಡಿಎಸ್ ಮುಖಂಡರ ಸಭೆ ಕರೆಯಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಾಹಿತಿ ನೀಡಿದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ರಾಜು ಕಾಗೆ ನಮ್ಮ ಸಂಪರ್ಕಕ್ಕೂ ಸಿಗುತ್ತಿಲ್ಲ: ಜಗದೀಶ್ ಶೆಟ್ಟರ್