ಗದಗ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರೋ ಕಾಂಗ್ರೆಸ್ ಕಚೇರಿಯಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಸಾರ್ವಜನಿಕರು ಹಲವಾರು ಸಮಸ್ಯೆಗಳನ್ನು ಹೊತ್ತು ತಂದು, ಸಚಿವರ ಬಳಿ ಸಮಸ್ಯೆ ಹೇಳಿಕೊಂಡರು. ಈ ವೇಳೆ ಸಚಿವರು ನೂರಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಮಾಡಲು ಪ್ರಯತ್ನಿಸಿದರು. ಸಂಬಂಧಿಸಿದ ಅಧಿಕಾರಿಗಳಿಗೆ ಸಮಸ್ಯೆಗಳ ಪರಿಹಾರಕ್ಕೆ ಸೂಚನೆ ನೀಡಿದರು.