ಬೆಂಗಳೂರು: ಮಹಿಳೆಯೊಬ್ಬರ ಮೇಲೆ ಮಾಜಿ ಸಚಿವ ಮತ್ತು ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ಹಲ್ಲೆ ಮತ್ತು ಜಾತಿ ನಿಂದನೆ ಮಾಡಿರುವ ಕುರಿತು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ನಂದಿನಿ ನಾಗರಾಜ್ ಎಂಬ ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಲು ಯತ್ನಿಸಿದ ವಿಡಿಯೋ ವೈರಲ್ ಆಗಿದ್ದು, ಈ ಸಂಬಂಧ ಬೆಂಗಳೂರಿನ ಹೈ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ನಂದಿನಿ ದೂರು ದಾಖಲಿಸಿದ್ದಾರೆ. ರೇವಣ್ಣ ಮಹಿಳೆಯ ಮೊಬೈಲ್ ಕಸಿದುಕೊಳ್ಳುತ್ತಿರುವ ದೃಶ್ಯ ವಿಡಿಯೊದಲ್ಲಿ ದಾಖಲಾಗಿದೆ.
ಸೋಮವಾರ ಮಧ್ಯಾಹ್ನ ಕುಮಾರಕೃಪಾದಲ್ಲಿ ರೇವಣ್ಣ ಅವರು ನನ್ನ ಮೇಲೆ ಹಲ್ಲೆ ಮಾಡಿರುವುದಾಗಿ ಮಹಿಳೆ ಆರೋಪಿಸಿದ್ದಾರೆ. ರೇವಣ್ಣ ಅವರು ನನ್ನ ಮೊಬೈಲ್ ಕಸಿದುಕೊಂಡು ನನನ್ನು ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ್ದಾರೆ. ಬಳಿಕ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಹಲ್ಲೆ ಪರಿಣಾಮ ಮಹಿಳೆಯ ಕೈ ಮೂಳೆಗೆ ಫ್ಯಾಕ್ಚರ್ ಆಗಿದ್ದು, ಬಳಿಕ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸದ್ಯ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ರೇವಣ್ಣ ಅವರು ಈ ಆರೋಪವನ್ನು ತಳ್ಳಿಹಾಕಿದ್ದು, ಮಹಿಳೆ ತಮ್ಮನ್ನು ಕಿರಿಕಿರಿಗೊಳಿಸಿದ್ದರು ಎಂದು ಹೇಳಿದ್ದಾರೆ. ಅಲ್ಲದೆ, ಮಹಿಳೆ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.