Publish Date: Mon, 10 Jul 2017 (20:09 IST)
Updated Date: Mon, 10 Jul 2017 (20:11 IST)
ಇತ್ತೀಚೆಗೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಎಚ್. ವಿಶ್ವನಾಥ್ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಘೋಷಿಸಿದ್ದಾರೆ.
ಮೈಸೂರಿನ ಸಾ.ರಾ ಸಭಾಂಗಣದಲ್ಲಿ ನಡೆದ ಜೆಡಿಎಸ್ ಪಕ್ಷದ ಸೇರ್ಪಡೆ ಸಮಾವೇಶದಲ್ಲಿ ಮಾತನಾಡಿದ ಜಿ.ಟಿ ದೇವೇಗೌಡರು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಯಾಗಿಸಲು ಕ್ಷೇತ್ರವನ್ನು ತ್ಯಾಗ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಜೆಡಿಎಸ್‌ಗಾಗಿ, ಕುಮಾರಣ್ಣನಿಗಾಗಿ, ದೇವೇಗೌಡರಿಗಾಗಿ ನಾನು ಮತ್ತು ನನ್ನ ಪುತ್ರ ಮತ್ತು ಪ್ರಜ್ವಲ್ ವಿಧಾನಸಭಾ ಕ್ಷೇತ್ರವನ್ನು ವಿಶ್ವನಾಥ್‌ಗೆ ಬಿಟ್ಟುಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.
ಹುಣಸೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಲು ಜಿ.ಟಿ.ದೇವೇಗೌಡ, ಹರೀಶ್ ಗೌಡ ಮತ್ತು ಪ್ರಜ್ವಲ್ ಹರಸಾಹಸ ನಡೆಸಿದ್ದರು. ಆದರೆ, ಇದೀಗ ಎಚ್. ವಿಶ್ವನಾಥ್ ಜೆಡಿಎಸ್ ಅಭ್ಯರ್ಥಿಯಾಗಿ ಉಹಾಪೋಹಗಳಿಗೆ ಅಂತ್ಯಹಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.