Publish Date: Wed, 28 Jun 2017 (13:18 IST)
Updated Date: Wed, 28 Jun 2017 (13:20 IST)
ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಮಾಜಿ ಸಂಸದ ಎಚ್.ವಿಶ್ವನಾಥ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಮುಂಬರುವ ಜುಲೈ 4 ರಂದು ಎಚ್.ವಿಶ್ವನಾಥ್ ಸರಳ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷವನ್ನು ಸೇರಲಿದ್ದಾರೆ ಎಂದು ವಿಶ್ವನಾಥ್ ಪುತ್ರ ಪೂರ್ವಜ್ ತಿಳಿಸಿದ್ದಾರೆ.
ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸಿದ್ದ ಎಚ್.ವಿಶ್ವನಾಥ್, ಸಿಎಂ ಸಿದ್ದರಾಮಯ್ಯ ಸೇರಿದಂತೆ ಕೆಲ ಹಿರಿಯ ನಾಯಕರ ವಿರುದ್ಧದ ಭಿನ್ನಾಭಿಪ್ರಾಯದಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ.
ಕೆಲ ದಿನಗಳ ಹಿಂದೆ ನಾನು ಯಾವ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎನ್ನುವ ಮಾಹಿತಿ ಶೀಘ್ರದಲ್ಲಿ ನೀಡುತ್ತೇನೆ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ತಿಳಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.