Select Your Language

Notifications

webdunia
webdunia
webdunia
webdunia

ಕಾಂಗ್ರೆಸ್‌ಗೆ ಗುಡ್‌ಬೈ ಹೇಳಲು ಸಜ್ಜಾದ ಎಚ್.ವಿಶ್ವನಾಥ್

ಕಾಂಗ್ರೆಸ್‌ಗೆ ಗುಡ್‌ಬೈ ಹೇಳಲು ಸಜ್ಜಾದ ಎಚ್.ವಿಶ್ವನಾಥ್
ಮೈಸೂರು , ಸೋಮವಾರ, 19 ಜೂನ್ 2017 (20:23 IST)
ಕೊನೆಗೂ ಹಿರಿಯ ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ಕಾಂಗ್ರೆಸ್ ಪಕ್ಷಕ್ಕೆ ಗುಡ್‌ ಬೈ ಹೇಳಲು ಸಜ್ಜಾಗಿದ್ದಾರೆ.
 
ನಾಳೆ ಖಾಸಗಿ ಹೋಟೆಲ್‌ನಲ್ಲಿ ಬೆಂಬಲಿಗರು, ಹಿತೈಷಿಗಳ ಸಭೆ ಕರೆದಿರುವ ಎಚ್.ವಿಶ್ವನಾಥ್, ಸಭೆಯಲ್ಲಿಯೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಬಗ್ಗೆ ಘೋಷಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಐಸಿಸಿ ಮುಖಂಡರ ವರ್ತನೆಯಿಂದ ಬೇಸತ್ತಿರುವ ಅವರು, ಕಾಂಗ್ರೆಸ್ ಪಕ್ಷವನ್ನು ತೊರೆಯಲಿದ್ದಾರೆ. ಯಾವ ಪಕ್ಷ ಸೇರುತ್ತಾರೆ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲವಾದರೂ ಬಹುತೇಕ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
 
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕೆಲ ದಿನಗಳ ಹಿಂದೆ, ಶೀಘ್ರಧಲ್ಲಿಯೇ ಎಚ್,ವಿಶ್ವನಾಥ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿಕೆ ನೀಡಿರುವುದನ್ನು ಸ್ಮರಿಸಬಹುದು.

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರಮಾನಾಥ್ ರೈಗೆ ಕಲ್ಲಡ್ಕ ಪ್ರಭಾಕರ್ ಭಟ್ ತಿರುಗೇಟು