Publish Date: Sat, 06 Apr 2024 (19:57 IST)
Updated Date: Sat, 06 Apr 2024 (20:02 IST)
ಬೆಂಗಳೂರು: ಮಾಜಿ ಸಚಿವ ಎಚ್. ವಿಶ್ವನಾಥ್ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್. ವಿಶ್ವನಾಥ್ ಅವರು ಭೇಟಿಯಾಗಿ ಮಾತುಕತೆ ನಡೆಸಿದರು.
ಸದ್ಯ ಈ ನಾಯಕರು ಮುನಿಸು ಮರೆತು ಮತ್ತೆ ಒಂದಾಗಿರುವುದು ಹಲವು ಚರ್ಚೆಗಳಿಗೂ ಕಾರಣವಾಗಿದೆ.
ಇನ್ನೂ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಎಚ್.ಡಿ.ಕುಮಾರಸ್ವಾಮಿ ಅವರು, ಮಾಜಿ ಸಚಿವರು, ಹಿರಿಯ ನಾಯಕರು ಆದ ಹೆಚ್.ವಿಶ್ವನಾಥ್ ಅವರನ್ನು ಮೈಸೂರು ಜಿಲ್ಲೆಯ ಕೆ.ಆರ್.ನಗರದ ಅವರ ನಿವಾಸದಲ್ಲಿ ಭೇಟಿಯಾಗಿ ಲೋಕಸಭೆ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡೆ. ಅವರ ಪ್ರೀತಿ, ವಿಶ್ವಾಸ ಮತ್ತು ಸಕಾರಾತ್ಮಕ ಸ್ಪಂದನೆಗೆ ಕೃತಜ್ಞತೆಗಳನ್ನು ತಿಳಿಸಿದ್ದೇನೆ.
ಈ ಭೇಟಿಯ ಸಂದರ್ಭದಲ್ಲಿ @JanataDal_S ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು, ಮಾಜಿ ಸಚಿವ ಸಾ.ರಾ.ಮಹೇಶ್, ಸಿ.ಎಸ್.ಪುಟ್ಟರಾಜು, ಬಂಡೆಪ್ಪ ಕಾಷೆಂಪೂರ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಹಾಗೂ ವಿಶ್ವನಾಥ್ ಅವರ ಬೆಂಬಲಿಗರು ಉಪಸ್ಥಿತರಿದ್ದರು.