ಅಬಕಾರಿ ಸಚಿವ ಎಚ್.ವೈ.ಮೇಟಿ ಅವರ ರಾಸಲೀಲೆ ಪ್ರಕರಣದ ವಿಡಿಯೋ ಸಿಡಿ ಬಿಡುಗಡೆಯಾಗುವ ಮುನ್ನ ಕಾಂಗ್ರೆಸ್ ಪಕ್ಷದಲ್ಲಿ ಭೂಕಂಪವಾಗುತ್ತಿದೆ ಎಂದು ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಬಕಾರಿ ಸಚಿವ ಎಚ್.ವೈ.ಮೇಟಿ ಅವರ ಮೇಲೆ ಇಂತಹ ಆರೋಪ ಬಂದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವಳಿಕೆ ನೋಡಿದರೆ ವಿಡಿಯೋ ಸಿಡಿಯಲ್ಲಿ ಇಂತಹ ರಾಸಲೀಲೆ ಇದೆ ಎಂಬ ಸಂಶಯ ವ್ಯಕ್ತವಾಗುತ್ತಿದೆ. ಹೀಗಾಗಿ ಇದನ್ನು ಮುಚ್ಚಿಡಲು ಸಿಎಂ ಸೇರಿದಂತೆ ಗೃಹ ಸಚಿವರು ಹಾಗೂ ಪ್ರಮುಖ ಸಚಿವರು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದರು.
ಸಚಿವರ ವಿರುದ್ಧದ ಪ್ರಕರಣವನ್ನು ಬಹಿರಂಗಗೊಳಿಸಲು ಯತ್ನಿಸಿದ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಅವರಿಗೆ ಪ್ರಾಣ ಬೆದರಿಕೆ ಇದೆ. ಹೀಗಾಗಿ ಅವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.
ಪೊಲೀಸ್ ಇಲಾಖೆಯ ಮೂಲಕ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಅವರಿಗೆ ಭಯ ಹುಟ್ಟಿಸುವ ಕೆಲಸವನ್ನು ರಾಜ್ಯ ಸರಕಾರವೇ ಮಾಡುತ್ತಿದೆ. ಸಚಿವರ ವಿರುದ್ಧದ ರಾಸಲೀಲೆ ಆರೋಪವನ್ನು ರಾಜ್ಯ ಸರಕಾರ ಮುಚ್ಚಿ ಹಾಕುಲು ಯತ್ನಿಸುತ್ತಿದೆ. ಈ ಕೂಡಲೇ ಸಿಎಂ ಸಿದ್ದರಾಮಯ್ಯ ಅವರು ಅಬಕಾರಿ ಸಚಿವ ಎಚ್.ವೈ.ಮೇಟಿ ಅವರ ರಾಜೀನಾಮೆ ಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ