Publish Date: Sun, 13 Aug 2017 (15:14 IST)
Updated Date: Sun, 13 Aug 2017 (15:16 IST)
ಮಾಜಿ ಸಚಿವ ಎಚ್.ವೈ ಮೇಟಿ ಸಿಡಿ ಪ್ರಕರಣದಲ್ಲಿ ಸಂತ್ರಸ್ಥೆಯಾಗಿದ್ದ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.
ಸಂತ್ರಸ್ಥೆ ವಿಜಯಲಕ್ಷ್ಮಿ ನಿದ್ರೆಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಮಾಜಿ ಸಚಿವ ಎಚ್.ವೈ ಮೇಟಿ ಸಿಡಿ ಪ್ರಕರಣದಲ್ಲಿ ಸಂತ್ರಸ್ಥೆಯಾಗಿದ್ದ ಮಹಿಳೆ ವಿಜಯಲಕ್ಷ್ಮಿ, ನಂಚರ ಉಲ್ಟಾ ಹೊಡೆದು ನನಗೆ ಮಾಜಿ ಸಚಿವರು ಕಿರುಕುಳ ನೀಡಿಲ್ಲ ಎಂದು ಹೇಳಿಕೆ ನೀಡಿದ್ದಳು.
ವಿಜಯಲಕ್ಷ್ಮಿ ಆತ್ಮಹತ್ಯೆ ಪ್ರಯತ್ನದಿಂದಾಗಿ ಮತ್ತೆ ಮಾಜಿ ಸಚಿವ ಎಚ್.ವೈ.ಮೇಟಿ ಪ್ರಕರಣ ಮತ್ತೆ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.