Select Your Language

Notifications

webdunia
webdunia
webdunia
Monday, 7 April 2025
webdunia

ಬಿಟ್ ಕಾಯಿನ್ ಸೂತ್ರಧಾರ ಹ್ಯಾಕರ್ ಶ್ರೀಕಿ ನಾಪತ್ತೆ

Shreeki
ಬೆಂಗಳೂರು , ಬುಧವಾರ, 17 ನವೆಂಬರ್ 2021 (14:46 IST)
ಹ್ಯಾಕರ್ ಶ್ರೀಕಿ ಭದ್ರತೆಗೆ ಸಬ್ ಇನ್ಸ್ ಪೆಕ್ಟರ್ ಓರ್ವರನ್ನು ನೇಮಕ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
 
ಶ್ರೀಕಿ ಜೀವಕ್ಕೆ ಅಪಾಯವಿದೆ ಎಂದು ಸಿದ್ದರಾಮಯ್ಯ ಸೇರಿದಂತೆ ವಿಪಕ್ಷ ನಾಯಕರು ಆರೋಪಿಸಿದ್ದರು.ಹಿನ್ನೆಲೆಯಲ್ಲಿ ಎಚ್ಚೆತ್ತ ಖುದ್ದು ಪೊಲೀಸ್ ಆಯುಕ್ತ ಕಮಲ್ ಪಂತ್, ಶ್ರೀಕಿ ಭದ್ರತೆಗಾಗಿ ಸಬ್ ಇನ್ಸ್ ಪೆಕ್ಟರ್ ಒಬ್ಬರನ್ನು ನಿಯೋಜಿಸಿದ್ದು, ಶ್ರೀಕಿ ಕುಟುಂಬದವರನ್ನು ಸಂಪರ್ಕಿಸಿದ್ದಾರೆ.
 
ಆದರೆ ಶ್ರೀಕಿ ಮನೆಗೆ ಬರುತ್ತಿಲ್ಲ. ಆತ ಎಲ್ಲಿದ್ದಾನೆ ಎಂಬುದೂ ಗೊತ್ತಿಲ್ಲ ಎಂದು ಕುಟುಂಬದವರು ಸಬ್ ಇನ್ಸ್ ಪೆಕ್ಟರ್ ಗೆ ತಿಳಿಸಿದ್ದಾರೆ. ಶ್ರೀಕಿ ಭದ್ರತೆಗಾಗಿ ನಿಯೋಜನೆಗೊಂಡಿರುವ ಸಬ್ ಇನ್ಸ್ ಪೆಕ್ಟರ್ ಪ್ರತಿದಿನ ಶ್ರೀಕಿ ಮನೆಗೆ ಹೋಗಿ, ಬರಿಗೈಲಿ ವಾಪಸ್ ಆಗುತ್ತಿದ್ದಾರೆ ಎನ್ನಲಾಗಿದೆ. ಶ್ರೀಕಿ ಎಲ್ಲಿದ್ದಾನೆ ಎಂದು ಗೊತ್ತಿಲ್ಲ ಎಂದು ಕುಟುಂಬದವರು ಹೇಳುತ್ತಿರುವುದರಿಂದ ಶ್ರೀಕಿ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಥಮ ಬಾರಿಗೆ ಸೋಲಾರ್ ವಿದ್ಯುತ್ ಘಟಕ ಅಳವಡಿಕೆ!