Publish Date: Sun, 29 Jun 2025 (16:13 IST)
Updated Date: Sun, 29 Jun 2025 (16:15 IST)
ಬೆಂಗಳೂರು: ಕಾವೇರಿ ಆರತಿ ಸಂಬಂಧ ಹೈಕೋರ್ಟ್ ನೋಟಿಸ್‌ಗೆ ಕಾನೂನು ಮುಖಾಂತರವೇ ಉತ್ತರ ನೀಡಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದರು.
ಇಂದು ಸದಾಶಿವನಗರ ನಿವಾಸದ ಬಳಿ ಪ್ರತಿಕ್ರಿಯಿಸಿದ ಅವರು, ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ಬಗ್ಗೆ ಕೇಳಿದಾಗ, ಪೂಜೆ, ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಅದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ ಎಂದರು.
ಇನ್ನು ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಲಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ಗೆ ಟಾಂಗ್ ಕೊಟ್ಟ ಡಿಕೆಶಿ, ಅಶೋಕ್ ಏನಾದ್ರೂ ಜ್ಯೋತಿಷ್ಯ ಹೇಳಲು ಆರಂಭಿಸಿದ್ದಾರಾ. ಹಾಗೇನಾದ್ರೂ ಇದ್ರೆ ನನಗೂ ಸಮಯ ಕೊಡಿಸಿ, ನಾನು ಹೋಗಿ ಭವಿಷ್ಯ ಕೇಳ್ತೆನೆ ಎಂದರು.