Publish Date: Mon, 09 Nov 2020 (10:09 IST)
Updated Date: Mon, 09 Nov 2020 (10:11 IST)
ಬಳ್ಳಾರಿ : ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕೆ ದರ್ಪ ವಿಚಾರಕ್ಕೆ ಸಂಬಂಧಿಸಿದಂತೆ ನ.11ರಂದು ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ಪಟ್ಟಣ ಬಂದ್ ಗೆ ನಿರ್ಧಾರ ಮಾಡಲಾಗಿದೆ.
ಶಾಸಕರ ವರ್ತನೆ ಖಂಡಿಸಿ ನ.11ರಂದು ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ ಎಂದು ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ನೇಮಿರಾಜ್ ಮಾಹಿತಿ ನೀಡಿದ್ದಾರೆ.
ಹಗರಿಬೊಮ್ಮನಹಳ್ಳಿ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯ ಸಮಯದಲ್ಲಿ ಪುರಸಭೆ ಮುಂದೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಆ ವೇಳೆ ಪರಿಸ್ಥಿತಿಯನ್ನು ತಿಳಿಗೊಳಿಸಬೇಕಿದ್ದ ಶಾಸಕ ಭೀಮಾನಾಯ್ಕೆ ದರ್ಪ ತೋರಿದ್ದಾರೆ ಎನ್ನಲಾಗಿದೆ.