2 ದಿನಗಳಿಂದ ಬಿಜೆಪಿ ನಾಯಕರ ಕೈಗೆ ಸಿಗದೇ ಓಡಾಡುತ್ತಿರುವ ಹಾಲಪ್ಪ, ‘ಕೈ’ ಹಿಡಿತಾರಾ?!

Webdunia
ಸೋಮವಾರ, 2 ಏಪ್ರಿಲ್ 2018 (12:02 IST)
ಶಿವಮೊಗ್ಗ: ಶಿವಮೊಗ್ಗದಲ್ಲಿ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಗಾಗಿ ಭಾರೀ ಫೈಟ್ ನಡೆಯುತ್ತಿದ್ದು, ಅಸಮಾಧಾನದ ಬೆಂಕಿಗೆ ದೊಡ್ಡ ವಿಕೆಟ್ ಉರುಳುವ ಸೂಚನೆ ಹಾಲಪ್ಪ ರೂಪದಲ್ಲಿ ಕಂಡುಬರುತ್ತಿದೆ.
 

ಸೊರಬದಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿರುವ ಮಾಜಿ ಸಚಿವ ಹಾಲಪ್ಪ ಇದೀಗ ಬಿಜೆಪಿ ತೊರೆಯುವ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. 2 ದಿನಗಳಿಂದ ಬಿಜೆಪಿ ನಾಯಕರ ಕೈಗೆ ಸಿಗದೇ ಓಡಾಡುತ್ತಿರುವ ಹಾಲಪ್ಪ ಕಾಂಗ್ರೆಸ್ ಸೇರುತ್ತಾರೆಂಬ ಸುದ್ದಿ ಬಂದಿದೆ.

ಇದಕ್ಕೆ ಸರಿಯಾಗಿ, ಸಿಎಂ ಸಿದ್ದರಾಮಯ್ಯ ಕೂಡಾ ನಿನ್ನೆ ಹಾಲಪ್ಪ ಪರವಾಗಿ ಮಾತನಾಡಿದ್ದರು. ಕಾಂಗ್ರೆಸ್ ಕೂಡಾ ಹಾಲಪ್ಪ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿಲ್ಲ. ಈ ಎಲ್ಲಾ ಬೆಳವಣಿಗೆಯ ಹಿನ್ನಲೆಯಲ್ಲಿ ನಿನ್ನೆ ತಡರಾತ್ರಿ ಜಿಲ್ಲಾ ನಾಯಕರೊಂದಿಗೆ ಸಭೆ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಲಪ್ಪ ಮನ ಒಲಿಸಿ ಸಾಗರ ಟಿಕೆಟ್ ನೀಡುವ ಭರವಸೆ ನೀಡಲು ಸೂಚಿಸಿದ್ದಾರೆ. ಆದರೆ ಹಾಲಪ್ಪ ಇದೀಗ ಬಿಜೆಪಿ ನಾಯಕರ ಸಂಪರ್ಕಕ್ಕೆ ಸಿಗುತ್ತಿಲ್ಲ. ಇದು ಬಿಜೆಪಿಗೆ ದೊಡ್ಡ ತಲೆನೋವಾಗಿ ಪರಿಣಮಿಸುವ ಲಕ್ಷಣ ಕಾಣುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಯಾಣಿಕರ ಓಡಾಟದಲ್ಲಿ ಹೊಸ ದಾಖಲೆ ಬರೆದ ಕೆಂಪೇಗೌಡ ವಿಮಾನ ನಿಲ್ದಾಣ: ಇಲ್ಲಿದೆ ಅಪ್‌ಡೇಟ್‌

ಅನುದಾನ ಕೊಡಿ ಎಂದು ಮಲ್ಲಿಕಾರ್ಜುನ ಖರ್ಗೆಯವರೂ ಬೇಡಿಕೊಳ್ಳಬೇಕಾ: ಬಿವೈ ವಿಜಯೇಂದ್ರ ವ್ಯಂಗ್ಯ

ವಿಕೇರ್ ನಿಂದ ಅತ್ಯಾಧುನಿಕ ಸೆಂಟರ್ ಆಫ್ ಎಕ್ಸೆಲೆನ್ಸ್ ಪ್ರಾರಂಭ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments