Publish Date: Fri, 10 Dec 2021 (08:36 IST)
Updated Date: Fri, 10 Dec 2021 (08:38 IST)
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ದಟ್ಟ ಮಂಜು ಆವರಿಸಿರುವ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇರುವ ವಿಮಾನ ಲ್ಯಾಂಡಿಂಗ್‌ಗೆ ಸಮಸ್ಯೆಯಾಗಿದೆ.
ಸಿಎಂ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾರೆ. ಇಬ್ಬರೂ ನಾಯಕರು ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿದ್ದಾರೆ. ಅರ್ಧ ಗಂಟೆ ಆದ್ರೂ ಲ್ಯಾಂಡಿಂಗ್‌ಗೆ ಕ್ಲಿಯರೆನ್ಸ್ ಸಿಕ್ಕಿಲ್ಲ. ಹೀಗಾಗಿ ಸಿ ಎಂ ಬೊಮ್ಮಾಯಿ, ಕೇಂದ್ರ ಸಚಿವರು ಇರುವ ಇಂಡಿಗೋ ವಿಮಾನ ಆಕಾಶದಲ್ಲೇ 3 ಸುತ್ತು ಸುತ್ತು ಹಾಕಿದೆ.
ಇದರಿಂದ ಮೇಲೆಯೇ ಹಾರಾಟ ನಡೆಸಿದರೆ ಇಂಧನ ಖಾಲಿಯಾಗುವ ಆತಂಕ ಎದುರಾಗಿತ್ತು. ಈ ಆತಂಕದ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆದರೆ ಕೊನೆಯ ಘಳಿಗೆಯಲ್ಲಿ ವಿಮಾನ ಮಂಗಳೂರಿನತ್ತ ತೆರಳಿಲ್ಲ.