ಬೆಂಗಳೂರು : ರಾಜ್ಯದ ಪ್ರಮುಖ ಉತ್ಸವಗಳಲ್ಲಿ ಒಂದಾಗಿರುವ ಹಂಪಿ ಉತ್ಸವವನ್ನು ಅಚ್ಚುಕಟ್ಟಾಗಿ ವಿಜೃಂಭಣೆಯಿಂದ ಅಯೋಜಿಸುವಂತೆ ಉತ್ಸವದ ಲೋಗೋ ಮತ್ತು ಪೋಸ್ಟರ್ ಬಿಡುಗಡೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಹಾರೈಸಿದರು.
ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳು ತಮ್ಮ ಕಚೇರಿಯಲ್ಲಿ ಹಂಪಿ ಉತ್ಸವದ ಲೋಗೋ ಮತ್ತು ಪೋಸ್ಟರ್ ಬಿಡುಗಡೆ ಮಾಡಿದ್ರು. ಬಳಿಕ ಮಾತನಾಡಿದ ಸಿಎಂ, ಜನವರಿ 27, 28 ಹಾಗೂ 29 ನಡೆಯಲಿರುವ ಹಂಪಿ ಉತ್ಸವ ರಾಜ್ಯದ ಪ್ರಮುಖ ಉತ್ಸವಗಳಲ್ಲಿ ಒಂದಾಗಿದೆ. ಈ ಉತ್ಸವವನ್ನು ಮೊದಲಿಂದಲೂ ಅದ್ಧೂರಿಯಾಗಿ ಆಚರಿಸಲಾಗುತ್ತದೆ.
ಕೋವಿಡ್ ಕಾರಣದಿಂದ ಕಳೆದೆರಡು ವರ್ಷ ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಅದ್ಧೂರಿಯಾಗಿ ಮೂರು ದಿನಗಳ ಕಾಲ ಆ ಆಚರಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಈ ಮೂರು ದಿನಗಳ ಉತ್ಸವವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು.