Select Your Language

Notifications

webdunia
webdunia
webdunia
Thursday, 10 April 2025
webdunia

ಕೀಚಕನನ್ನ ಗಲ್ಲಿಗೇರಿಸಿ; ಪೋಷಕರ ಆಕ್ರೋಶ

Hang Keechaka; Parental outrage
ಮಂಡ್ಯ , ಶುಕ್ರವಾರ, 14 ಅಕ್ಟೋಬರ್ 2022 (18:50 IST)
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದ ಬಾಲಕಿ ಕೊಲೆ ಪ್ರಕರಣದ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದ್ದು, ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ತಿಳಿದುಬಂದಿದೆ. ಟ್ಯೂಷನ್​ ನೀಡುವ ನೆಪದಲ್ಲಿ ಕರೆಸಿಕೊಂಡ ಕಾಂತರಾಜ್ ಎಂಬಾತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಿಂದ ಬಹಿರಂಗಗೊಂಡಿದೆ. ಆರೋಪಿ ಕಾಂತರಾಜ್ ಬಾಲಕಿಗೆ ಟ್ಯೂಷನ್ ನೀಡುವುದಾಗಿ ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಸದೆ ಸುಮಾಲತಾ ಮತ್ತು ಪೊಲೀಸರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮಗೆ ನ್ಯಾಯ ಸಿಕ್ತಿಲ್ಲ ಎಂದು ಅಳಲು ತೊಡಿಕೊಂಡಿದ್ದಾರೆ. ಮಳವಳ್ಳಿಯಲ್ಲಿ ಘೋರ ಘಟನೆ ನಡೆದಿದ್ದು, 9 ವರ್ಷದ ಮಗುವಿಗೆ ಚಿತ್ರ ಹಿಂಸೆಕೊಟ್ಟು ಕೊಲೆ ಮಾಡಿದ್ದಾರೆ. ಪೊಲೀಸರು ಲಂಚ ಪಡೆದಿದ್ದಾರೆ ಎಂದು ಬಾಲಕಿಯ ತಾಯಿ ಆರೋಪಿಸಿದ್ದಾರೆ. ಆರೋಪಿಯನ್ನ ಗಲ್ಲಿಗೇರಿಸಬೇಕೆಂದು ಅಜ್ಜಿ ಕಣ್ಣೀರಿಟ್ಟಿದ್ದಾರೆ.  ಸಿಎಂ ಸಾಹೇಬ್ರೇ ಏನು ಮಾಡ್ತಿದ್ದೀರಾ? ಸುಮಲತಾ ಅವರೇ ನ್ಯಾಯ ಕೊಡ್ಸಿ ಅಂತಾ ಕಣ್ಣೀರಿಡುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುರುಘಾ ಶ್ರೀ ವಿರುದ್ಧ ಮತ್ತೊಂದು ಲೈಂಗಿಕ ಕಿರುಕುಳ ಆರೋಪ