Publish Date: Sun, 03 Dec 2017 (13:25 IST)
Updated Date: Sun, 03 Dec 2017 (13:26 IST)
ನಿಷೇಧಧ ನಡುವೆಯೂ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ನಿಗದಿತ ಮಾರ್ಗ ಬಿಟ್ಟು ಬೇರೆ ಮಾರ್ಗದಲ್ಲಿ ಹನುಮ ಮೆರವಣಿಗೆ ನಡೆಸುತ್ತಿದ್ದರು. ಹುಣಸೂರು ಪ್ರವೇಶಿಸುವ ವೇಳೆ ಪ್ರತಾಪ್ ಸಿಂಹ ಹಾಗೂ ಹಲವು ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮತ್ತೊಂದೆಡೆ ಸಂಸದ ಪ್ರತಾಪ್ ಸಿಂಹ ಬಂಧನಕ್ಕೆ ಕಾರ್ಯಕರ್ತರ ಆಕ್ರೋಶ ವ್ಯಕ್ತವಾಗಿದ್ದು, ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಲಾಗಿದೆ. ಪ್ರತಾಪ್ ಸಿಂಹ ಬರುವವರೆಗೆ ಮೆರವಣಿಗೆ ತೆಗೆದುಕೊಂಡು ಹೋಗುವುದಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.
ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದಾಗ, ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರು. ಇದರಿಂದ ಸ್ಥಳದಲ್ಲಿ ಉದ್ರಿಕ್ತ ವಾತಾವರಣ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.