Publish Date: Mon, 23 Oct 2023 (19:00 IST)
Updated Date: Mon, 23 Oct 2023 (20:01 IST)
ನಾಡಿನೆಲ್ಲೆಡೆ ದಸರಾ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಇದೇ ವೇಳೆ ಮಾಜಿ ಪ್ರಧಾನಿ ಡಾ.ಹೆಚ್ಡಿ ದೇವೇಗೌಡ ನಾಡಿನ ಜನತೆಗೆ ಶುಭ ಕೋರಿದ್ದಾರೆ. ನಾಡಿನ ಜನತೆಗೆ ಆಯುಧ ಪೂಜೆ, ವಿಜಯದಶಮಿ ಹಬ್ಬದ ಶುಭಾಶಯಗಳು. ನಾಡದೇವತೆ ಚಾಮುಂಡೇಶ್ವರಿ ತಾಯಿ ಸಕಲ ಭಕ್ತರಿಗೆ ಆರೋಗ್ಯ, ಆಯಸ್ಸು ನೆಮ್ಮದಿ ಕರುಣಿಸಿ ಎಲ್ಲರ ಇಷ್ಟಾರ್ಥಗಳನ್ನು ಈಡೇರಿಸಲಿ ಎಂದು ಪ್ರಾರ್ಥಿಸ್ತೇನೆ ಎಂದು ಎಕ್ಸ್ನಲ್ಲಿ ಪೋಸ್ಟ್ ಹಾಕುವ ಮೂಲಕ ಶುಭಾಶಯ ತಿಳಿಸಿದರು.