ಅತ್ಯಾಚಾರಕ್ಕೊಳಗಾದ ಮಹಿಳೆಗೆ ಗ್ರಾಮಸ್ಥರಿಂದ ಕಿರುಕುಳ

Webdunia
ಶುಕ್ರವಾರ, 25 ಜನವರಿ 2019 (07:11 IST)
ಜಾರ್ಖಂಡ್ : ಅತ್ಯಾಚಾರಕ್ಕೊಳಗಾದ ಮಹಿಳೆಗೆ ಗ್ರಾಮಸ್ಥರು ಹಿಂಸೆ ನೀಡಿದ ಹಿನ್ನಲೆಯಲ್ಲಿ ಆಕೆ ಆತ್ಮಹತ್ಯೆಗೆ ಯತ್ನಸಿದ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

ಆರು ತಿಂಗಳ ಹಿಂದೆ ಮಹಿಳೆ ಮೇಲೆ ಗ್ರಾಮದ ಯುವಕನೊಬ್ಬ ಅತ್ಯಾಚಾರವೆಸಗಿದ್ದನಂತೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರು ಸಂತ್ರಸ್ತ ಮಹಿಳೆಗೆ ಚುಚ್ಚಿ ಚುಚ್ಚಿ ಮಾತನಾಡಿದ್ದಾರೆ. ಗಂಗಾ ಸ್ನಾನ ಮಾಡಿ, ದೇವರ ಪೂಜೆ ಮಾಡಿ, ಗ್ರಾಮದ ಜನರಿಗೆ ಭೋಜನದ ವ್ಯವಸ್ಥೆ ಮಾಡುವಂತೆ ಪಂಚಾಯತಿ ಮುಖಂಡರು ಹೇಳಿದ್ದಾರೆ. ಅಲ್ಲದೇ ನಾಲ್ಕು ಲಕ್ಷ ರೂಪಾಯಿ ದಂಡ ನೀಡುವಂತೆಯೂ ಹೇಳಿದ್ದರಂತೆ.

 

ಇದರಿಂದ ನೊಂದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ ಆಕೆಯನ್ನು ರಕ್ಷಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪೊಲೀಸರು ಗ್ರಾಮದ ಮುಖಂಡರ ವಿಚಾರಣೆ ನಡೆಸಿದಾಗ ಸ್ನಾನ, ಪೂಜೆ ಬಗ್ಗೆ ಸೂಚನೆ ನೀಡಿದ್ದು ನಿಜ, ದಂಡ ವಿಧಿಸಿಲ್ಲವೆಂದು ಹೇಳಿದ್ದಾರೆ. ಅಲ್ಲದೇ ಆಕೆಯ ಪತಿ ಬೇರೆ ಊರಿನಲ್ಲಿ ಕೆಲಸ ಮಾಡುತ್ತಿರುವುದರಿಂದ ಆಕೆ ಪರ ಪುರುಷನ ಜೊತೆ ಸಂಬಂಧ ಹೊಂದಿದ್ದಾಳೆ. ಆದರೆ ಈಗ ಆ ವ್ಯಕ್ತಿ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ್ದಾಳೆ ಎಂದು ಅವರು ಆರೋಪಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments