Publish Date: Thu, 06 Feb 2020 (12:34 IST)
Updated Date: Thu, 06 Feb 2020 (12:36 IST)
ಚಿತ್ರದುರ್ಗ : ಶಿಕ್ಷಕನೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಘಟನೆ ಚಿತ್ರದುರ್ಗ ಜಿಲ್ಲೆಯ ಗೋಪಾಲಪುರ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ತಿಪ್ಪೇಸ್ವಾಮಿ(51) ಇಂತಹ ನೀಚ ಕೃತ್ಯ ಎಸಗುತ್ತಿದ್ದ ಶಿಕ್ಷಕ. ಈತ 6,7 ನೇ ತರಗತಿಯ ಬಾಲಕಿಯರ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದಲ್ಲದೇ ಮೊಬೈಲ್ ನಲ್ಲಿರುವ ಅಶ್ಲೀಲ ವಿಡಿಯೋಗಳನ್ನು ವಿದ್ಯಾರ್ಥಿನಿಯರಿಗೆ ತೋರಿಸುತ್ತಿದ್ದನಂತೆ. ಇದರಿಂದ ಬೇಸತ್ತ ವಿದ್ಯಾರ್ಥಿನಿಯರು ಪೋಷಕರ ಮುಂದೆ ಈ ವಿಚಾರ ಹೇಳಿದ್ದಾರೆ.
ಈ ಹಿನ್ನಲೆಯಲ್ಲಿ ಪೋಷಕರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಿಸಿದ್ದಾರೆ. ತನ್ನ ಮೇಲೆ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಶಿಕ್ಷಕ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.