ಕೋರ್ಟ್ ತೀರ್ಪಿನ ಬಳಿಕ ಹರತಾಳು ಹಾಲಪ್ಪ ಹೇಳಿದ್ದು.

Webdunia
ಗುರುವಾರ, 17 ಆಗಸ್ಟ್ 2017 (17:55 IST)
ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪನವರಿಗೆ ಕ್ಲೀನ್ ಚಿಟ್ ಸಿಕ್ಕಿದೆ. ನ್ಯಾಯಾಲಯ ತೀರ್ಪು ಪ್ರಕಟಿಸುತ್ತಿದ್ದಂತೆ ಹೊರ ಬಂದು ಮಾಧ್ಯಮಗಳ ಜೊತೆ ಮಾತನಾಡಿದ ಹಾಲಪ್ಪ ಇದು ಸತ್ಯಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ.
 

ಇದು ಸತ್ಯಕ್ಕೆ ಸಿಕ್ಕ ಜಯ, ನನ್ನ ವಿರುದ್ಧ ವ್ಯವಸ್ಥಿತ ರಾಜಕೀಯ ಸಂಚು ನಡೆಸಲಾಗಿತ್ತು.  ನನ್ನ ವಿರುದ್ಧ ಸಂಚು ಮಾಡಿದವರಿಗೆ ನಿರಾಸೆಯಾಗಿದೆ.ನನ್ನ ವಿರುದ್ಧ ನೀಡಿದ್ದ ದೂರು ನೂರಕ್ಕೆ ನೂರರಷ್ಟು ಸುಳ್ಳು.ಕೆ ತೆರಳುವುದಾಗಿ ಹೇಳಿದ್ದಾರೆ.  ಅವತ್ತೂ ಸಹ ಅದೇ ಮಾತನ್ನ ಹೇಳಿದ್ದೆ, ಇವತ್ತೂ ಅದನ್ನೇ ಹೇಳುತ್ತಿದ್ದೇನೆ ಎಂದು ಹಾಲಪ್ಪ ಹೇಳಿದ್ದಾರೆ. ಅವತ್ತೂ ಕೂಡ ಹಲವರು ಇದೊಂದು ಸಂಚು ಎಂದು ಹೇಳಿದ್ದರು. ಈಗ ಅದು ಸಾಬೀತಾಗಿದೆ ಹರತಾಳು ಹಾಲಪ್ಪ ಹೇಳಿದ್ದಾರೆ.

ಜಾಮೀನು ಕೊಡುವಾಗಲೇ ಪ್ರಕರಣದಲ್ಲಿ ರಾಜಕೀಯ ಸಂಚಿರುವ ಹಾಗಿದೆ ತನಿಖೆ ಮಾಡಿ ಎಂದು ಹೈಕೋರ್ಟ್ ಹೇಳಿತ್ತು. ಅದು ಈಗ ಸಾಬೀತಾಗಿದೆ. ಇದೇವೇಳೆ, ತನಗೆ ಬೆಂಬಲ ನೀಡಿದ ಪಕ್ಷದ ನಾಯಕರು, ಸ್ನೇಹಿತರಿಗೆ ಧನ್ಯವಾದ ಹೇಳಿದ್ದಾರೆ. ನಾಳೆ ಬೆಳಗ್ಗೆ ನಾನು ನಂಬುವ ಸಿಗಂದೂರೇಶ್ವರಿ ದರ್ಶನಕ್ಕೆ ತೆರಳುತ್ತಿರುವುದಾಗಿ ಹರತಾಳು ಹಾಲಪ್ಪ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments