ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಟ್ಟಾ ವಿರೋಧಿ ಪಾಳಯದಲ್ಲಿ ಗುರುತಿಸಿಕೊಂಡಿದ್ದ, ಪಾಟೀದಾರ್ ಸಮುದಾಯದ ಯುವ ಮುಖಂಡ ಹಾರ್ದಿಕ್ ಪಟೇಲ್ ಅವರ ಹೇಳಿಕೆ, ಗುಜರಾತ್ ರಾಜಕೀಯದಲ್ಲಿ ಹೊಸ ಲೆಕ್ಕಾಚಾರಕ್ಕೆ ನಾಂದಿ ಹಾಡಿದೆ. ರಾಜ್ಯದಲ್ಲಿ ಬಿಜೆಪಿ ಉತ್ತಮ ಸರಕಾರವನ್ನು ನೀಡುತ್ತಿದೆ, ಕೆಲವೊಂದು ಸರಕಾರೀ ಕಾರ್ಯಕ್ರಮಗಳು ಜನರನ್ನು ತಲುಪುತ್ತಿವೆ. ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಖಂಡಿತ ಸ್ಪರ್ಧಿಸುತ್ತೇನೆ. ಆದರೆ, ಯಾವ ಕ್ಷೇತ್ರದಿಂದ ಎಂದು ಈಗ ಹೇಳಲು ಸಾಧ್ಯವಿಲ್ಲ"ಎಂದು ಹಾರ್ದಿಕ್ ಪಟೇಲ್ ಹೇಳಿದ್ದಾರೆ. ಪಟೇಲ್ ಅವರ ಈ ಹೇಳಿಕೆಯಿಂದ ಅವರು ಬಿಜೆಪಿಯತ್ತ ಮುಖ ಮಾಡಿದ್ದಾರೆಯೇ ಎನ್ನುವ ಅನುಮಾನ ಎದುರಾಗುತ್ತಿದೆ ಎಂದು ಸ್ಥಳೀಯ ಮುಖಂಡರು ಪ್ರಶ್ನೆಯನ್ನು ಎತ್ತಿದ್ದಾರೆ.