Select Your Language

Notifications

webdunia
webdunia
webdunia
webdunia

ಡಿಕೆಶಿಗೆ ಸಂಕಷ್ಟ : ಕೋರ್ಟ್ ಗೆ ಹಾಜರಾಗುವಂತೆ ಸಮನ್ಸ್ ಜಾರಿ

ಡಿಕೆಶಿಗೆ ಸಂಕಷ್ಟ : ಕೋರ್ಟ್ ಗೆ ಹಾಜರಾಗುವಂತೆ ಸಮನ್ಸ್ ಜಾರಿ
ನವದೆಹಲಿ , ಮಂಗಳವಾರ, 31 ಮೇ 2022 (13:56 IST)
ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಐದು ಮಂದಿಗೆ ದೆಹಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಜುಲೈ 1 ರಂದು ಕೋರ್ಟ್ ಮುಂದೆ ಹಾಜರಾಗುವಂತೆ ಸೂಚಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಶಿವಕುಮಾರ್ ಹಾಗೂ ಇತರೆ ಆರೋಪಿಗಳ ವಿರುದ್ಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದರು.

ಚಾರ್ಜ್ ಶೀಟ್ ಅನ್ವಯ ಇತರೆ ಆರೋಪಿಗಳಾದ ಸಚಿನ್ ನಾರಯಣ್, ಸುನೀಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ, ರಾಜೇಂದ್ರಗೆ ಸಮನ್ಸ್ ಜಾರಿ ಮಾಡಲಾಗಿದೆ.

ಕಳೆದ ಶುಕ್ರವಾರ ಪ್ರಕರಣ ವಿಚಾರಣೆ ನಡೆಸಿದ್ದ ಕೋರ್ಟ್, ಚಾರ್ಜ್ಶೀಟ್ನಲ್ಲಿ IPC 120 B (ವ್ಯವಸ್ಥಿತ ಸಂಚು) ಸೇರ್ಪಡೆ ಬಗ್ಗೆ ಸ್ಪಷ್ಟನೆ ಕೇಳಿತ್ತು.

ಇದಕ್ಕೆ ಇಡಿ ಪರ ವಾದ ಮಂಡಿಸಿದ್ದ ವಕೀಲರು, ಕರ್ನಾಟಕ ಸೇರಿದಂತೆ ಮೂರು ಹೈಕೋರ್ಟ್ ಆದೇಶಗಳನ್ನು ಉಲ್ಲೇಖಿಸಿ, 120 B (ವ್ಯವಸ್ಥಿತ ಸಂಚು) ಇಡಿ ಪ್ರಕರಣಗಳಲ್ಲಿ ಸೇರಿಸಿ ವಿಚಾರಣೆ ನಡೆಸಬಹುದು ಎಂದು ಹೇಳಿದರು.


Share this Story:

Follow Webdunia kannada

ಮುಂದಿನ ಸುದ್ದಿ

6 ಮಕ್ಕಳನ್ನು ಬಾವಿಗೆ ಎಸೆದ ಕ್ರೂರಿ ತಾಯಿ!