Publish Date: Mon, 24 Jul 2023 (18:50 IST)
Updated Date: Mon, 24 Jul 2023 (17:52 IST)
ಸಿಎಂ ಮಾಡೋದು ಗೊತ್ತು, ಇಳಿಸೋದು ಗೊತ್ತು ಎಂಬ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಪ್ರವಾಸೋದ್ಯಮ ಹಾಗೂ ಕಾನೂನು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಬಿ.ಕೆ.ಹರಿಪ್ರಸಾದ್ ಕಾಂಗ್ರೆಸ್‌ನ ಹಿರಿಯ ನಾಯಕರು. ಅವರು ಸಾಕಷ್ಟು ಸಿಎಂಗಳನ್ನು ಮಾಡಿದ್ದಾರೆ. ಆದರೆ ಹರಿಪ್ರಸಾದ್ ಆ ರೀತಿ ಹೇಳಿಕೆ ನೀಡಿರಲಾರರು. ಇದೆಲ್ಲವೂ ಮಾದ್ಯಮಗಳ ಸೃಷ್ಟಿ. ನಾನು ಹರಿಪ್ರಸಾದ್ ಏನು ಹೇಳಿದ್ದಾರೆ ನೋಡಿಲ್ಲ. ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದರು.