Select Your Language

Notifications

webdunia
webdunia
webdunia
webdunia

ನಿಮ್ಮ ಆಸ್ತಿ ಯಾರಾದರೂ ಬರೆಸಿಕೊಂಡಿದ್ದಾರೆಯೇ: ಡಿಸಿಎಂ ಶಿವಕುಮಾರ್‌ಗೆ ಸಚಿವ ರಾಜಣ್ಣ ನೇರ ಟಾಂಗ್‌

Deputy Chief Minister DK Shivakumar

Sampriya

ತುಮಕೂರು , ಬುಧವಾರ, 8 ಜನವರಿ 2025 (16:18 IST)
Photo Courtesy X
ಬೆಂಗಳೂರು: ಕರ್ನಾಟಕದಲ್ಲಿ ಡಿನ್ನರ್ ಮೀಟಿಂಗ್ ಪಾಲಿಟಿಕ್ಸ್ ಬಗ್ಗೆ ಚರ್ಚೆಯಾಗುತ್ತಿದೆ, ಇಂದು ಸಚಿವ ಪರಮೇಶ್ವರ್ ಕರೆದಿದ್ದ ಡಿನ್ನರ್ ಮೀಟಿಂಗ್ ರದ್ದಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಹಕಾರ ಸಚಿವ ಕೆ.ಎನ್ ರಾಜಣ್ಣ, ಸಭೆ ರದ್ದಾಗಿಲ್ಲ. ಮುಂದೂಡಿದ್ದೇವೆ ಎಂದಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೇಜಾರಾಗಲು ಯಾರಾದರು ಅವರ ಆಸ್ತಿ ಬರೆಸಿಕೊಂಡಿದ್ದಾರೆಯೇ ಎಂದು ರಾಜಣ್ಣ ಪ್ರಶ್ನಿಸಿದರು. ಮುಖ್ಯಮಂತ್ರಿ ಮತ್ತು ಸಚಿವರ ಡಿನ್ನರ್ ಸಭೆಯಿಂದ ಡಿ.ಕೆ.ಶಿವಕುಮಾರ್ ಅವರಿಗೆ ಬೇಜಾರಾಗಿ, ಹೈಕಮಾಂಡ್‌ಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದರು.

ಪರಿಶಿಷ್ಟ ಜಾತಿ, ಪಂಗಡದ ಮಕ್ಕಳಿಗೆ ವಿದ್ಯಾರ್ಥಿ ವೇತನ ಸಿಗುತ್ತಿಲ್ಲ. ಮ್ಯಾನೇಜ್‌ಮೆಂಟ್ ಕೋಟಾದಡಿ ಪ್ರವೇಶ ಪಡೆದವರಿಗೆ ಹಾಸ್ಟೆಲ್ ಪ್ರವೇಶ ನೀಡುತ್ತಿಲ್ಲ. ಇಂತಹ ಸಮಸ್ಯೆ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿತ್ತು. ಸಭೆ ಮಾಡಬೇಡಿ ಎಂದರೆ ಇವರು ಪರಿಶಿಷ್ಟ ಸಮುದಾಯದ ವಿರೋಧಿಗಳೇ? ಇದು ಬಹಳ ದಿನ ನಡೆಯುವುದಿಲ್ಲಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಕರೆದ ಸಭೆಗೆ ರಾಜಕೀಯ ಲೇಪನ ಕೊಟ್ಟು, ವಿರೋಧ ವ್ಯಕ್ತಪಡಿಸುವುದು ಪರಿಶಿಷ್ಟ ಸಮುದಾಯಗಳಿಗೆ ಮಾಡುವ ಅನ್ಯಾಯ ಎಂದು ಕಿಡಿಕಾರಿದರು.

ಈಚೆಗೆ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ನಡೆದ ಸಭೆಯಿಂದ ಪಕ್ಷದಲ್ಲಿ ಗೊಂದಲ ಮೂಡಿದೆ. ಅದರ ಜತೆಗೆ ಮತ್ತೊಂದು ಗೊಂದಲ ಸೃಷ್ಟಿಯಾಗುವುದು ಬೇಡ ಎಂದು ಹೈಕಮಾಂಡ್ ನಾಯಕರು ಸಭೆ ಮುಂದೂಡುವಂತೆ ಹೇಳಿದ್ದಾರೆ. ಅದಕ್ಕಾಗಿ ಸಭೆ ಮುಂದೂಡಲಾಗಿದೆ. ರದ್ದು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
 

Share this Story:

Follow Webdunia kannada

ಮುಂದಿನ ಸುದ್ದಿ

ನಕಲ್‌ ಶರಣಾಗತಿ ಪರಿಹಾರ ನಮಗೂ ಸಿಗಬೇಕು: ಎನ್‌ಕೌಂಟರ್‌ಗೆ ಬಲಿಯಾದ ವಿಕ್ರಂ ಗೌಡ ಸಹೋದರಿ ಅಳಲು