Select Your Language

Notifications

webdunia
webdunia
webdunia
webdunia

ಹಾಸನ ರಾಜಕಾರಣಿಯ ಪೆನ್‌ಡ್ರೈವ್ ಕೇಸ್: ಎಸ್‌ಐಟಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

Siddaramaiah

Sampriya

ಬೆಂಗಳೂರು , ಭಾನುವಾರ, 28 ಏಪ್ರಿಲ್ 2024 (12:23 IST)
ಬೆಂಗಳೂರು: ಹಾಸನ ಯುವ ರಾಜಕಾರಣಿಯೊಬ್ಬರ  ಲೈಂಗಿಕ ದೌರ್ಜನ್ಯ ಆರೋಪದ ವೀಡಿಯೋ ಕುರಿತ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ ಎಂದು  ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಗೆ ದಿನಾಂಕ ಹತ್ತಿರವಾಗುತ್ತಿದ್ದ ಹಾಗೇ ದೊಡ್ಡ ಮನೆತನದ, ಹಾಸನ ಯುವ ರಾಜಕಾರಣಿಯೊಬ್ಬರ ಮಹಿಳೆಯರೊಂದಿಗಿನ ಲೈಂಗಿಕ ಚಟುವಟಿಕೆಗಳ ವಿಡಿಯೋಗಳು ಹರಿದಾಡುತ್ತಿದೆ. ಸದ್ಯ ಯುವ ರಾಜಕಾರಣಿ ಮಹಿಳೆಯೊಂದಿಗಿನ ವಿಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು.

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಗುರುವಾರ ಪತ್ರ ಬರೆದು, ಹಾಸನ ಜಿಲ್ಲೆಯ ಪ್ರಭಾವಿ ರಾಜಕಾರಣಿಯೊಬ್ಬ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಬೆದರಿಕೆ ಹಾಕುತ್ತಿರುವ ಆರೋಪದ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚಿಸುವಂತೆ ಶಿಫಾರಸು ಮಾಡಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಬರ ಪರಿಹಾರದಲ್ಲಿ ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಮಹಾಮೋಸ: ಕೈ ನಾಯಕರಿಂದ ಪ್ರತಿಭಟನೆ