ಹಾಸನ: ಅಡುಗೆ ವಿಚಾರಕ್ಕೆ ತಾಯಿಯನ್ನೇ ಕೊಲೆಗೈದ ಪಾಪಿ ಮಗ

Sampriya
ಶುಕ್ರವಾರ, 3 ಅಕ್ಟೋಬರ್ 2025 (17:12 IST)
ಹಾಸನ: ಅಡುಗೆ ವಿಚಾರಕ್ಕೆ ತಾಯಿ ಮಗನ ನಡುವೆ ನಡೆದ ಜಗಳದಲ್ಲಿ ತಾಯಿಯ ಕೊಲೆಯಲ್ಲಿ ಅಂತ್ಯವಾದ ಆಘಾತಕಾರಿ ಘಟನೆ ಆಲೂರಿನ ಕದಾಳುಚನ್ನಾಪುರ ಗ್ರಾಮದಲ್ಲಿ ನಡೆದಿದೆ. 

ಮಗನಿಂದ ಕೊಲೆಯಾದ ತಾಯಿಯನ್ನು ಪ್ರೇಮ(45) ಎಂದು ಗುರುತಿಸಲಾಗಿದೆ.  ಸಂತೋಷ್‌ (19) ಹೆತ್ತ ತಾಯಿಯನ್ನೇ ಕೊಲೆಗೈದ ಆರೋಪಿಯಾಗಿದ್ದಾನೆ. 

ಮಗ ಸಂತೋಷ್‌, ಗುರುವಾರ ರಾತ್ರಿ ಕಂಠಪೂರ್ತಿ ಕುಡಿದು ಮನೆಗೆ ಬಂದು ತಾಯಿ ಜತೆ ಅಡುಗೆ ವಿಚಾರವಾಗಿ ಜಗಳವಾಡಿದ್ದಾನೆ. ಕೋಪದಲ್ಲಿ ಮಾತಿಗೆ ಮಾತು ಬೆಳೆದು ದೊಣ್ಣೆಯಿಂದ ತಲೆಗೆ ಬಲವಾಗಿ ಹೊಡೆದಿದ್ದಾನೆ. 

ಗಂಭೀರವಾಗಿ ಗಾಯಗೊಂಡಿದ್ದ ಪ್ರೇಮ ಅವರನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.  ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾರ ಪ್ರೇರಣೆಯಿಂದ ಇದೆಲ್ಲ ಆಯ್ತು: ಡಿಕೆಶಿ ಹೆಸರು ಹೇಳದೆಯೇ ಗುಡುಗಿದ ದೇವೇಗೌಡ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ವಿಶ್ವ ದಾಖಲೆ ಬರೆದ ಕಾಂಗ್ರೆಸ್ ಶಕ್ತಿ ಯೋಜನೆ: ಸಿಎಂ ಸಿದ್ದರಾಮಯ್ಯ ಫುಲ್ ಖುಷ್

ಮಲೆ ಮಹದೇಶ್ವರದಲ್ಲಿ ಐದು ಹುಲಿಗಳು ಸಾವನ್ನಪ್ಪಿದ ಪ್ರದೇಶದಲ್ಲೇ ಮತ್ತೊಂದು ಆಘಾತಕಾರಿ ಘಟನೆ

ಸಂಕಷ್ಟಕ್ಕೆ ಬಾರದ ಸಿದ್ದರಾಮಯ್ಯನವರು ಬೆಳಗಾವಿಗೆ ಬಿರಿಯಾನಿ ತಿನ್ನಲು ಬರುತ್ತಿದ್ದಾರೆ: ಅಶೋಕ

ಮುಂದಿನ ಸುದ್ದಿ
Show comments