Publish Date: Sun, 31 May 2026 (12:48 IST)
Updated Date: Sun, 31 May 2026 (12:52 IST)
ಹಾಸನ: ನೇಣುಬಿಗಿದುಕೊಂಡು ಉಪತಹಶೀಲ್ದಾರ್ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಹಾಸನ ನಗರದ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ನಡೆದಿದೆ.
ಸಾವಿಗೆ ಶರಣಾದ ಉಪತಹಶೀಲ್ದಾರ್ ಅವರನ್ನು ತಿಮ್ಮಯ್ಯ (52) ಎಂದು ಗುರುತಿಸಲಾಗಿದೆ. ಮೈಸೂರು ಜಿಲ್ಲೆ, ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿದ್ದ ತಿಮ್ಮಯ್ಯ,
ಮೂರು ವರ್ಷಗಳ ಹಿಂದೆ ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಮೇ 30 ಲಾಡ್ಜ್‌ನಲ್ಲಿ 4 ಪುಟದ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೂಲತಃ ಕೊಡಗು ಜಿಲ್ಲೆಯವರಾದ ತಿಮ್ಮಯ್ಯ ಹಾಸನ ನಗರದ ಚನ್ನಪಟ್ಟಣದ ದ್ಯಾವಮ್ಮ ಬಡಾವಣೆಯಲ್ಲಿ ಕುಟುಂಬಸ್ಥರೊಂದಿಗೆ ವಾಸವಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ