ಮಂಗಳೂರು: ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಯೂ ಇಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಮಸೂದೆಯ ಬಗ್ಗೆ ವಿವರಣೆ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಪಕ್ಷಗಳಿಂದ ಭಾರೀ ವಿರೋಧಕ್ಕೆ ಕಾರಣವಾದ ದ್ವೇಷ ಭಾಷಣ ಪ್ರತಿಬಂಧಕ ಮಸೂದೆ ಬಗ್ಗೆ ನಿನ್ನೆ ರಾಜ್ಯಪಾಲರ ತಿರಸ್ಕರಿಸಿದರು ಎಂಬ ಸುದ್ದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.
ಇನ್ನೂ ಬಳ್ಳಾರಿ ಬ್ಯಾನರ್ ತೆರವು ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಉದ್ಘಾಟನೆ ಬಗ್ಗೆ ಹಾಕಿದ್ದ ಬ್ಯಾನರನ್ನು ತೆಗೆಯಬೇಕಾದ ಅಗತ್ಯವೇನಿತ್ತು? ಅದನ್ನು ತೆಗೆದದ್ದೆ ಘಟನೆಗೆ ಕಾರಣವಾಯಿತು. ಜನಾರ್ದನ ರೆಡ್ಡಿ, ಶ್ರೀರಾಮುಲು ಅವರು ಸ್ಥಾನ ಕಳೆದುಕೊಂಡಿದ್ದರ ಮೇಲಿನ ಅಸೂಯೆಯಿಂದ ನಡೆದುಕೊಳ್ಳುತ್ತಿದ್ದಾರೆಂದು ಆರೋಪಿಸಿದರು.