Select Your Language

Notifications

webdunia
webdunia
webdunia
webdunia

ಪೊಲೀಸರ ಮೇಲೆ ವಿಶ್ವಾಸವಿದ್ದು, ಪ್ರಜ್ವಲ್ ಪ್ರಕರಣ ಸಿಬಿಐಗೆ ವಹಿಸಲ್ಲ: ಸಿಎಂ ಸಿದ್ದರಾಮಯ್ಯ

Siddaramaih

Sampriya

ಬೆಂಗಳೂರು , ಶುಕ್ರವಾರ, 10 ಮೇ 2024 (16:42 IST)
ಬೆಂಗಳೂರು: ಪ್ರಜ್ವಲ್ ರೇವಣ್ಣ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಾನಾಗಲೀ, ಡಿಸಿಎಂ ಡಿ.ಕೆ.ಶಿವಕುಮಾರ್‌ ಆಗಲೀ ಅಥವಾ ಸರ್ಕಾರದ ಯಾರೊಬ್ಬರೂ ಹಸ್ತಕ್ಷೇಪ ಮಾಡುತ್ತಿಲ್ಲ. ನನಗೆ ಎಸ್.ಐ.ಟಿ. ಮೇಲೆ ವಿಶ್ವಾಸವಿದ್ದು, ಸಿಬಿಐಗೆ ವಹಿಸುವ ಅಗತ್ಯವಿಲ್ಲೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅವರು ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಈಚೆಗೆ ವಿಪಕ್ಷ ನಾಯಕರು ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮಗೆ ಬೇಕಾದ ಹಾಗೇ ತನಿಖೆಯನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಅದಲ್ಲದೆ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸುತ್ತಿದ್ದಾರೆ.

ಇದೀಗ ಈ ಸಂಬಂಧ ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು,  ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯ ತನಿಖೆ ನಡೆಸಲಿದ್ದಾರೆ.

ಬಿಜೆಪಿಯವರು ಯಾವತ್ತಾದರೂ ಒಂದು ಪ್ರಕರಣವಾದರೂ ಸಿಬಿಐಗೆ ಕೊಟ್ಟಿದ್ದಾರಾ? ಹಿಂದೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಪ್ರಕರಣ, ಒಂದಂಕಿ ಲಾಟರಿ ಪ್ರಕರಣ, ಸಚಿವರಾದ ಕೆ.ಜೆ. ಜಾರ್ಜ್‌ ಅವರ ಮೇಲಿನ ಆರೋಪ, ಪರೇಶ್‌ ಮೇಸ್ತಾ ಸಾವಿನ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಗಿತ್ತು.

ಹಿಂದೆ ಬಿಜೆಪಿಯವರೇ ಸಿಬಿಐ ಯನ್ನು ಕರಪ್ಷನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು ಚೋರ್‌ ಬಚಾವೋ ಸಂಸ್ಥೆ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ಅವರಿಗೆ ವಿಶ್ವಾಸ ಬಂತಾ? ನನಗೆ ಸಿಬಿಐ ಮೇಲೆ ವಿಶ್ವಾಸವಿದೆ. ಆದರೆ, ನಮ್ಮ ಪೊಲೀಸರ ಬಗ್ಗೆ ಹೆಚ್ಚು ನಂಬಿಕೆ ಇದೆ. ಅದಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಿದ್ದೇವೆ.

ನಮ್ಮ ಸರ್ಕಾರ ಕಾನೂನು ರೀತ್ಯ ನಡೆಯುತ್ತಿರುವ ಕೆಲಸದಲ್ಲಿ, ತನಿಖೆಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಅವರು ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತಾರೆಂದು ನಂಬಿದ್ದೇನೆ. ನಾನು ಯಾವತ್ತೂ ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡಿ ಎಂದು ಹೇಳಿಲ್ಲ, ಹೇಳುವುದೂ ಇಲ್ಲ. ಈ ಪ್ರಕರಣದಲ್ಲಿ ಅಂತರರಾಷ್ಟ್ರೀಯ ಮಟ್ಟದ ತನಿಖೆಯ ಅಗತ್ಯವಿಲ್ಲ. ಎಲ್ಲ ಅಪರಾಧ ಪ್ರಕರಣಗಳ ತನಿಖೆ ಯಾರು ಮಾಡುತ್ತಾರೆ? ನಮ್ಮ ಪೊಲೀಸರಲ್ಲವೇ? ಅವರದ್ದೇ ವಿಶೇಷ ತನಿಖಾದಳ ರಚಿಸಿರುವುದಲ್ಲವೇ? ನಮ್ಮ ಪೊಲೀಸರನ್ನು ನಾವು ನಂಬಬೇಕಲ್ಲವೆ?

ಪ್ರಜ್ವಲ್ ರೇವಣ್ಣನವರ ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ನಾನಾಗಲೀ, ಡಿ.ಕೆ.ಶಿವಕುಮಾರ್‌ ಆಗಲೀ, ಸರ್ಕಾರದ ಯಾರೊಬ್ಬರೂ ಹಸ್ತಕ್ಷೇಪ ಮಾಡುತ್ತಿಲ್ಲ. ನನಗೆ ಎಸ್.ಐ.ಟಿ. ಮೇಲೆ ವಿಶ್ವಾಸವಿದೆ. ಸತ್ಯಾಸತ್ಯತೆ ಹೊರಬರುವ ನಂಬಿಕೆ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಜ್ವಲ್‌ ಪೆನ್‌ಡ್ರೈವ್ ಹಂಚಿಕೆ ಪ್ರಕರಣ: ದೇವರಾಜೇಗೌಡ, ಕಾರ್ತಿಕ್‌ಗೆ ಎಸ್‌ಐಟಿ ನೋಟಿಸ್‌