ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಮೇಕೆದಾಟು ಅಣೆಕಟ್ಟೆ ಕಟ್ಟಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ನಾವು ಕಾನೂನು ಕ್ರಮಕ್ಕೂ ಹಿಂಜರಿಯುವುದಿಲ್ಲ ಎಂದು ತಮಿಳುನಾಡು ಸರ್ಕಾರ ಘೋಷಿಸಿದೆ. ಈ ಬಗ್ಗೆ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಿ ಜೆಡಿಎಸ್ ಪೋಸ್ಟ್ ಮಾಡಿದೆ.
ಜೆಡಿಎಸ್ ಹಂಚಿಕೊಂಡ ಪೋಸ್ಟ್‌ನಲ್ಲಿ ಹೀಗಿದೆ: ಕರ್ನಾಟಕ ರಾಜ್ಯಕ್ಕೆ ಮೇಕೆದಾಟು ಅಣೆಕಟ್ಟೆ ಕಟ್ಟಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ನಾವು ಕಾನೂನು ಕ್ರಮಕ್ಕೂ ಹಿಂಜರಿಯುವುದಿಲ್ಲ ಎಂದು ತಮಿಳುನಾಡು ಸರ್ಕಾರ ಘೋಷಿಸಿದೆ.
ಮಿಸ್ಟರ್ ಡಿಕೆ ಶಿವಕುಮಾರ್, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೇ ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುತ್ತೇವೆ ಎಂದು ಹುಸಿ ಭರವಸೆ ಕೊಟ್ಟು, ಈಗ ಡಿಎಂಕೆ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದೀರಿ.
ಚೆನ್ನೈಗೆ ತೆರಳಿ ತಮಿಳುನಾಡು ಸಿಎಂ ಸ್ಟಾಲಿನ್ ಜೊತೆ ಕೈ ಕುಲುಕಿ, ಶಾಲು ಹೊದ್ದಿಸಿಕೊಂಡು ಬಂದರೇ ಮೇಕೆದಾಟು ಡ್ಯಾಂ ನಿರ್ಮಾಣ ಸಾಧ್ಯವಿಲ್ಲ !
ಮೇಕೆದಾಟು ಯೋಜನೆಗೆ ಸದಾ ಅಡ್ಡಗಾಲು ಹಾಕುತ್ತಿರುವ ಇಂಡಿ(INDI) ಮೈತ್ರಿಕೂಟದ ಮಿತ್ರಪಕ್ಷ ಡಿಎಂಕೆ ಸರ್ಕಾರವನ್ನು ಮೊದಲು ಒಪ್ಪಿಸುವ ತಾಕತ್ತು , ಎದೆಗಾರಿಕೆ ನಿಮ್ಮಲ್ಲಿ ಇದೆಯೇ ತೋರಿಸಿ.